ಸಾರಾಂಶ
ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಟನ್‌ಪೇಟೆ ನಿವಾಸಿ ಶಂಕರ್ ಅಲಿಯಾಸ್ ಪಾಚಪ್ಪ (41) ಘಟನೆಯಲ್ಲಿ ಮೃತ ಪಟ್ಟಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಟನ್‌ಪೇಟೆ ನಿವಾಸಿ ಶಂಕರ್ ಅಲಿಯಾಸ್ ಪಾಚಪ್ಪ (41) ಘಟನೆಯಲ್ಲಿ ಮೃತ ಪಟ್ಟಿದ್ದಾರೆ.ವೃತ್ತಿಯಲ್ಲಿ ಕಾರ್ಪೆಂಟರ್ ಆಗಿರುವ ತಮಿಳುನಾಡು ಮೂಲದ ಶಂಕರ್ ಹಲವು ವರ್ಷಗಳಿಂದ ಕಾಟನ್‌ಪೇಟೆಯಲ್ಲಿ ನೆಲೆಸಿದ್ದರು. ಶುಕ್ರವಾರ ಬೆಳಗ್ಗೆ ಕೆಲಸದ ನಿಮಿತ್ತ ಉಲ್ಲಾಳ ಕೆರೆ ಸಮೀಪದ ನೂರಡಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ತಡರಾತ್ರಿ ಶಂಕರ್ ಮೃತಪಟ್ಟಿದ್ದಾರೆ. ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.