ಕಾರು ಬೈರ್‌ಗೆ ಡಿಕ್ಕಿ: ಸರ್ಕಾರಿ ಶಾಲಾ ಮುಖ್ಯಶಿಕ್ಷಕ ಸ್ಥಳದಲ್ಲೇ ಸಾವು

| Published : Mar 20 2024, 01:20 AM IST

ಕಾರು ಬೈರ್‌ಗೆ ಡಿಕ್ಕಿ: ಸರ್ಕಾರಿ ಶಾಲಾ ಮುಖ್ಯಶಿಕ್ಷಕ ಸ್ಥಳದಲ್ಲೇ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ರಾಮಕೃಷ್ಣೇಗೌಡ ಕರ್ತವ್ಯ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ನಾಗಮಂಗಲದಿಂದ- ಮೈಸೂರು ಕಡೆಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆ ಮುಖ್ಯಶಿಕ್ಷಕನ ಬೈಕ್‌ಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮುಖ್ಯಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಜೋಡಿ ನೇರಲಕೆರೆ ಗೇಟ್ ಬಳಿ ಮಂಗಳವಾರ ಸಂಜೆ ಸಂಭವಿಸಿದೆ.

ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಎಚ್.ಭೂವನಹಳ್ಳಿ ರಾಮಕೃಷ್ಣೇಗೌಡ (59) ಸಾವನ್ನಪ್ಪಿರುವ ದುರ್ದೈವಿ ಮುಖ್ಯಶಿಕ್ಷಕ.

ತಾಲೂಕಿನ ಇಜ್ಜಲಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದ ರಾಮಕೃಷ್ಣೇಗೌಡ ಕರ್ತವ್ಯ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ನಾಗಮಂಗಲದಿಂದ - ಮೈಸೂರು ಕಡೆಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆ ನಾಗಮಂಗಲ ಪಟ್ಟಣ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಬಳಿಕ ರಾಮಕೃಷ್ಣೇಗೌಡರ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆ ಗೊಳಪಡಿಸಿದ್ದಾರೆ.

ಘಟನೆಯಿಂದಾಗಿ ಕಾರು ಮತ್ತು ಬೈಕ್ ನಜ್ಜುಗಜ್ಜಾಗಿದೆ. ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೈಕ್ ಮತ್ತು ಕಾರನ್ನು ವಶಕ್ಕೆ ಪಡೆದಿರುವ ಪಟ್ಟಣ ಠಾಣೆಯ ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮವಹಿಸಿದ್ದಾರೆ.

ಕಾರಿಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ: ಇಬ್ಬರಿಗೆ ಗಾಯಮಳವಳ್ಳಿ: ನಿಂತಿದ್ದ ಕಾರಿಗೆ ಹಿಂಬದಿಯಿಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಮೈಸೂರು ರಸ್ತೆ ಬದಿಯಲ್ಲಿ ನಡೆದಿದೆ.ತಾಲೂಕಿನ ರಾಗಿಬೊಮ್ಮನಹಳ್ಳಿಯ ಕೆಂಪಯ್ಯ ಮತ್ತು ಮಂಗಳಮ್ಮ ಗಾಯಗೊಂಡವವರು. ಮಂಗಳವಾರ ರಾಗಿಬೊಮ್ಮನಹಳ್ಳಿ ಗ್ರಾಮದ ಒಂದೇ ಕುಟುಂಬದ ಆರೇಳು ಮಂದಿ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿ ವಾಪಸ್ ಪಟ್ಟಣಕ್ಕೆ ಬಂದು ಮೈಸೂರು ರಸ್ತೆ ಬದಿಯಲ್ಲಿ ಹಣ್ಣು ಖರೀದಿಗೆ ಕಾರು ನಿಲ್ಲಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಸಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದ ಕೆಂಪಯ್ಯ ಮತ್ತು ಮಂಗಳಮ್ಮ ಎಂಬುವವರಿಗೆ ಗಾಯವಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಥಳಕ್ಕೆ ಪಟ್ಟಣದ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಎಸ್ ಅರ್ ಟಿಸಿ ಬಸ್ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪಟ್ಟಣದ ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಷೇಧ ಉಲ್ಲಂಘಿಸಿ ವ್ಹೀಲಿಂಗ್ ಬೈಕ್ ಚಾಲಕ ವಿರುದ್ಧ ಪ್ರಕರಣ ದಾಖಲುಮದ್ದೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ದ್ವಿಚಕ್ರ ವಾಹನಗಳ ಸಂಚಾರ ನಿಷೇಧ ಉಲ್ಲಂಘಿಸಿ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡಲು ಹೋಗಿ ಸ್ವಯಂ ಅಪಘಾತಕ್ಕೊಳಗಾಗಿದ್ದ ಬೈಕ್ ಚಾಲಕನ ವಿರುದ್ಧ ಮದ್ದೂರು ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತಾಲೂಕಿನ ದುಂಡನಹಳ್ಳಿಯ ಬೊಮ್ಮಲಿಂಗಯ್ಯನ ಪುತ್ರ ಹರ್ಷ ಅಲಿಯಾಸ್ ಹರೀಶ (22) ಅಪಘಾತದಲ್ಲಿ ಗಾಯಗೊಂಡಿರುವ ಬೈಕ್ ಚಾಲಕ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಚಾಲಕರ ಅತಿ ವೇಗದ ಚಾಲನೆಯಿಂದ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಬೈಕ್, ಟ್ರ್ಯಾಕ್ಟರ್ ಮತ್ತು ಎತ್ತಿನ ಗಾಡಿಗಳ ಸಂಚಾರ ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಬೈಕ್ ಚಾಲಕ ಹರ್ಷ ಕಳೆದ ಮಾರ್ಚ್ 18ರಂದು ತನ್ನ ಬಜಾಜ್ ಪಲ್ಸರ್ ಬೈಕ್‌ನಲ್ಲಿ ಬೆಂಗಳೂರಿನಿಂದ ಮದ್ದೂರಿಗೆ ಬರುವಾಗ ಎಪಿಎಂಸಿ ಎಳನೀರು ಮಾರುಕಟ್ಟೆ ಸಮೀಪದ ಮೇಲ್ ಸೇತುವೆ ಮೇಲೆ ವೀಲಿಂಗ್ ಮಾಡಲು ಹೋಗಿ ಸ್ವಯಂ ಅಪಘಾತಕ್ಕೊಳಗಾಗಿ ಗಾಯಗೊಂಡಿದ್ದನು.ನಂತರ ಸ್ಥಳಕ್ಕೆ ಧಾವಿಸಿದ ಸಂಚಾರಿ ಠಾಣೆ ಪೊಲೀಸರು ಬೈಕ್ ಚಾಲಕ ಹರ್ಷನ ವಿರುದ್ಧ ಐಪಿಸಿ 279 ಹಾಗೂ 337 ಅನ್ವಯ ಪ್ರಕರಣ ದಾಖಲೆ ಮಾಡಿಕೊಂಡು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.