ಸಾರಾಂಶ
ಮೂವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟು ಬೈಕ್ ಚಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಚಾಮನಹಳ್ಳಿ ಸಮೀಪ ಭಾನುವಾರ ರಾತ್ರಿ ಜರುಗಿದೆ.
ಮದ್ದೂರು : ಮೂವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟು ಬೈಕ್ ಚಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಚಾಮನಹಳ್ಳಿ ಸಮೀಪ ಭಾನುವಾರ ರಾತ್ರಿ ಜರುಗಿದೆ.
ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ರಂಗನಾಥಪುರ ಗ್ರಾಮದ ಮನೋಜ್ (23) ಅಪಘಾತದಲ್ಲಿ ಮೃತಪಟ್ಟ ಯುವಕ. ಬೈಕ್ ಚಾಲನೆ ಮಾಡುತ್ತಿದ್ದ ಮಂಜುನಾಥ್ ಹಾಗೂ ಹಿಂದೆ ಕುಳಿತಿದ್ದ ಮತ್ತೋರ್ವ ಪುರುಷೋತ್ತಮ್ ಗಾಯಗೊಂಡು ಮದ್ದೂರು ಆಸ್ಪತ್ರೆ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೃತ ಮನೋಜ್, ಗಾಯಾಳುಗಳಾದ ಮಂಜುನಾಥ್ ಮತ್ತು ಪುರುಷೋತ್ತಮ್ ಅವರುಗಳು ಒಂದೇ ಬೈಕ್‌ನಲ್ಲಿ ರಂಗನಾಥಪುರದಿಂದ ಬಂದು ಬೆಸಗರಹಳ್ಳಿ ಅಡ್ಡರಸ್ತೆಯ ಶಿಲ್ಪ ಶ್ರೀಕಲ್ಯಾಣ ಮಂಟಪದಲ್ಲಿ ಸ್ನೇಹಿತನ ವಿವಾಹ ಪೂರ್ವ ಆರತಕ್ಷತೆ ಸಮಾರಂಭದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು.
ಮದ್ದೂರು ಮತ್ತು ಕೊಪ್ಪ ರಸ್ತೆಯ ಚಾಮನಹಳ್ಳಿ ಸಮೀಪದ ನಾಡೋಜ ಜಿ.ನಾರಾಯಣ ಭವನದ ಮುಂದೆ ಹಿಂದಿನಿಂದ ಬಂದ ಕಾರು ಬೈಕ್ ನೇರವಾಗಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ನಾಪತ್ತೆಯಾಗಿರುವ ಕಾರಿನ ಪತ್ತೆಗಾಗಿ ಶೋಧಕಾರ್ಯ ಕೈಗೊಂಡಿದ್ದಾರೆ.