ಸಾರಾಂಶ
ಮದ್ದೂರು : ಬೈಕ್‌ಗೆ ಕಾರು ಡಿಕ್ಕಿಯಾಗಿ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ತಾಲೂಕಿನ ತೊರೆಶೆಟ್ಟಿಹಳ್ಳಿ ಗ್ರಾಮದ ಮದ್ದೂರು- ತುಮಕೂರು ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಜರುಗಿದೆ.
ಬೆಂಗಳೂರು ಕುಂಬಳಗೂಡು ಕೈಗಾರಿಕಾ ಪ್ರದೇಶದ ಎಂ.ಎಸ್.ಮ್ಯಾಕ್ಸ್ ಸೆನ್ಸರ್ ಉದ್ಯೋಗಿ ಎಂ.ಸಿ.ಪುಟ್ಟಸ್ವಾಮಿ (45) ಮೃತಪಟ್ಟವರು. ಅಪಘಾತದಲ್ಲಿ ತಲೆ ಮತ್ತು ದೇಹದ ವಿವಿಧ ಭಾಗಗಳಿಗೆ ತೀವ್ರ ಬಿದ್ದಪೆಟ್ಟಿನಿಂದಾಗಿ ಗಾಯಗೊಂಡಿದ್ದ ಪುಟ್ಟಸ್ವಾಮಿಗೆ ಮದ್ದೂರು, ಮಂಡ್ಯ ಆಸ್ಪತ್ರೆಗಳಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾರೆ.
ಮೂಲತಃ ಆತಗೂರು ಹೋಬಳಿ ಮಾಚಳ್ಳಿ ಗ್ರಾಮದ ಪುಟ್ಟಸ್ವಾಮಿ ಪ್ರತಿ ದಿನ ಕುಂಬಳಗೂಡು ಎಂ.ಎಸ್.ಮ್ಯಾಕ್ಸ್ ಕಂಪನಿ ಕೆಲಸಕ್ಕೆ ಹೋಗಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಮದ್ದೂರು- ತುಮಕೂರು ರಾಜ್ಯ ಹೆದ್ದಾರಿಯ ತೊರೆ ಶೆಟ್ಟಿಹಳ್ಳಿ ಬಳಿ ಎದುರಿನಿಂದ ಬರುತ್ತಿದ್ದ ಕಾರು ಮುಂದೆ ಹೋಗುತ್ತಿದ್ದ ಮತ್ತೊಂದು ಕಾರನ್ನು ಓವರ್ ಟೆಕ್ ಮಾಡಲು ಹೋಗಿ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಕೆಸ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲ ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.