ಬೈಕ್‌ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

| Published : Apr 04 2024, 01:05 AM IST / Updated: Apr 04 2024, 05:38 AM IST

death 2

ಸಾರಾಂಶ

 ಹಲಗೂರು ಕಡೆಯಿಂದ ಕನಕಪುರ ಕಡೆಗೆ ಚಲಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ರಕ್ತಸ್ರಾವ ಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ

 ಹಲಗೂರು :  ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಸಮೀಪದ ಕೆಂಪಯ್ಯನದೊಡ್ಡಿ ಗ್ರಾಮದ ಮಹದೇವ (38) ಮೃತಪಟ್ಟ ವ್ಯಕ್ತಿ. ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಸಣ್ಣ ಹೋಟೆಲ್ ನಡೆಸುತ್ತಿದ್ದ ಈತ ತನ್ನ ದೈನಂದಿನ ಕೆಲಸ ಮುಗಿಸಿ ಸ್ವಗ್ರಾಮಕ್ಕೆ ಹಿಂದುರುಗುತ್ತಿದಾಗ ಹಲಗೂರು ಕಡೆಯಿಂದ ಕನಕಪುರ ಕಡೆಗೆ ಚಲಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ರಕ್ತಸ್ರಾವ ಗೊಂಡ ಮಹದೇವ ಸ್ಥಳದಲ್ಲೇ ಮೃತಪಟ್ಟರು. ತೀವ್ರ ಗಾಯಗೊಂಡ ಹಿಂಬದಿ ಸವಾರ ನಂಜುಂಡ ನನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಾಗಿಸಲಾಗಿದೆ.

ಅಪಘಾತ ನಡೆದ ನಂತರ ಚಾಲಕ ತನ್ನ ಕಾರಿನೊಂದಿಗೆ ಪರಾರಿಯಾಗಿದ್ದು, ಅಪಘಾತ ಸ್ಥಳದ ಸ್ವಲ್ಪ ದೂರದಲ್ಲಿ ಬಿದ್ದಿದ್ದ ಕಾರಿನ ನಂಬರ್ ಪ್ಲೇಟ್ ಅಧಾರದ ಮೇಲೆ ಪೊಲೀಸರು ಚಾಲಕನ ಪತ್ತೆಗೆ ಮುಂದಾಗಿದ್ದಾರೆ.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ ವ್ಯಕ್ತಿ ಬಂಧನ, 275 ಗ್ರಾಂ ಗಾಂಜಾ ವಶ

ಶ್ರೀರಂಗಪಟ್ಟಣ: ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆ ದಾಳಿ ನಡೆಸಿದ ಕೆಆರ್‌ಎಸ್ ಠಾಣೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿ, 15 ಸಾವಿರ ಮೌಲ್ಯದ 275 ಗ್ರಾಂ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ತಾಲೂಕಿನ ಬೆಳಗೊಳ ಗ್ರಾಮದ ಹುಚ್ಚೇಗೌಡ ಬೀದಿ ನಿವಾಸಿ ಮಂಜುನಾಥ್ ಬಂಧಿತ ವ್ಯಕ್ತಿ. ಗ್ರಾಮದ ಸರ್ವಧರ್ಮ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಕೆಆರ್‌ಎಸ್ ಪಿಎಸ್‌ಐ ಬಸವರಾಜು ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬೇರೆಡೆಯಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಂಧಿತನಿಂದ 15 ಸಾವಿರ ರು. ಮೌಲ್ಯದ 275 ಗ್ರಾಂ ಗಾಂಜಾ ಸಮೇತ ಬಂಧಿಸಿದ ನಂತರ ಪಟ್ಟಣದ ನ್ಯಾಯಾಲಯ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಶ್ರೀಧರ, ಮಂಜುನಾಥ, ಪ್ರಭುಸ್ವಾಮಿ, ಪ್ರವೀಣ್, ಯದುರಾಜ ಇತರರು ಭಾಗವಹಿಸಿದ್ದರು.