ಸಾರಾಂಶ
ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.
ಹಲಗೂರು : ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಲ್ಲಾಪುರ ಬೈಪಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.
ಹಲಗೂರು ಸಮೀಪದ ಬಾಳೆಹೊನ್ನಿಗ ಗ್ರಾಮದ ಲೇ.ಕುಳ್ಳ ನಂಜಯ್ಯ ಅವರ ಪುತ್ರ ಬಿ.ಕೆ.ಮಂಜು (35) ಮೃತ ವ್ಯಕ್ತಿ.
ಹಲಗೂರು ಸರ್ವೀಸ್ ರಸ್ತೆಯಿಂದ ಹೆದ್ದಾರಿ ದಾಟುವಾಗ ಮಳವಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರು ಮಂಜು ಅವರು ಚಾಲನೆ ಮಾಡುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಂಜು ತಲೆಗೆ ತೀವ್ರ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೋಮವಾರ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿವೃತ್ತ ಶಿಕ್ಷಕ ರಾಮಚಂದ್ರ ನಿಧನ
ಶ್ರೀರಂಗಪಟ್ಟಣ: ರಾಜ್ಯ ಮತ್ತು ರಾಷ್ಟ್ರಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದ ನಿವೃತ್ತ ಶಿಕ್ಷಕ ರಾಮಚಂದ್ರ (85) ವಯೋಸಹಜ ಕಾಯಿಲೆಯಿಂದ ನಿಧರಾದರು.
ಮೃತರಿಗೆ ಓರ್ವ ಪುತ್ರ, ಪುತ್ರಿ ಇದ್ದಾರೆ. ಶ್ರೀರಂಗಪಟ್ಟಣ ಸ್ಟಾರ್ ಫುಟ್ ಬಾಲ್ ಕ್ಲಬ್‌ನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಲವು ಫುಟ್ ಬಾಲ್ ಪ್ರತಿಭೆಗಳನ್ನು ರಾಜ್ಯಕ್ಕೆ ನೀಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಜೊತೆಗೆ ಶಿಕ್ಷಕರಾಗಿಯೂ ಸೇವೆ ಸಲ್ಲಿಸಿದ್ದ ಇವರು ರಾಜ್ಯ ಮತ್ತು ರಾಷ್ಟ್ರ ಮಟ್ಟ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದರು. ಅಪಾರ ಶಿಷ್ಯರನ್ನು ಹೊಂದಿದ್ದರು. ಹೋಂಗಾರ್ಡ್ ವಿಭಾಗದಲ್ಲಿ ಕಮಾಂಡೆಂಡ್ ಆಗಿ ಸಾವಿರಾರು ಹೋಂಗಾರ್ಡ್‌ಳಿಗೆ ತರಬೇತಿ ನೀಡಿದ್ದರು. ಇವರ ನಿರಂತರ ಸಾಧನೆಗೆ ರಾಷ್ಟ್ರೀಯ ಮಟ್ಟದ ಹೋಂಗಾರ್ಡ್ ಕಮಾಂಡೆಂಡ್ ಆಗಿ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ನೂರಾರು ಕ್ರೀಡಾಪಟುಗಳು ಹಾಗೂ ಅವರ ವಿದ್ಯಾರ್ಥಿಗಳು ಅಂತಿಮ ದರ್ಶನ ಪಡೆದರು. ಮೃತರ ಅಂತ್ಯಕ್ರಿಯೆ ಪಟ್ಟಣದ ಶಂಭುಲಿಂಗಯ್ಯನ ಕಟ್ಟೆಯಲ್ಲಿ ನೆರವೇರಿಸಲಾಯಿತು.