ಸಾರಾಂಶ
ಕೆ.ಎಂ.ದೊಡ್ಡಿ : ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಎಸ್.ಐ.ಹಾಗಲಹಳ್ಳಿ ಗೇಟ್ ಬಳಿ ಜರುಗಿದೆ.
ಕೆ.ಎಂ.ದೊಡ್ಡಿ : ಬೈಕ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಎಸ್.ಐ.ಹಾಗಲಹಳ್ಳಿ ಗೇಟ್ ಬಳಿ ಜರುಗಿದೆ.
ಚನ್ನಪಟ್ಟಣ ತಾಲೂಕಿನ ಸೋಗಾಲ ಪಾಳ್ಯದ ನಿವಾಸಿ ಪುಟ್ಟಸ್ವಾಮಿಗೌಡ (62) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ಪುಟ್ಟಸ್ವಾಮಿ ತಮ್ಮ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಂಗಿ ಮನೆ ಇರುವ ತೊರೆಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ನಂತರ ತಮ್ಮ ಸ್ವಗ್ರಾಮ ಸೋಗಾಲ ಪಾಳ್ಯಕ್ಕೆ ತೆರಳುವ ವೇಳೆಯಲ್ಲಿ ಎಸ್.ಐ ಹಾಗಲಹಳ್ಳಿ ಗೇಟ್ ಹಲಗೂರು ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿ ಪುಟ್ಟಸ್ವಾಮಿಗೌಡ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಸ್ಥಳೀಯರು ಕೆ.ಎಂ.ದೊಡ್ಡಿ ಪೊಲೀಸರಿಗೆ ಮಾಹಿತಿ ನೀಡಿದ ತಕ್ಷಣ ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ನಂತರ ಸಮುದಾಯ ಆರೋಗ್ಯ ಕೆಂದ್ರದ ಶವಾಗಾರಕ್ಕೆ ಪಂಚನಾಮೆಗೆ ಕಳುಹಿಸಿ ನಂತರ ವಾರಸುದಾರರಿಗೆ ಶವವನ್ನು ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಹಿಂದೂ ಕಾರ್ಯಕರ್ತರು ಠಾಣೆಗೆ ದೂರು
ಮಂಡ್ಯ: ಮೈಸೂರಿನಲ್ಲಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆತ ಪ್ರಕರಣ ವಿಚಾರವಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ತಾಲೂಕಿನ ಕೆರೆಗೋಡು ಪೊಲೀಸ್ ಠಾಣೆಗೆ ಹಿಂದೂ ಕಾರ್ಯಕರ್ತರು ದೂರು ನೀಡಿದ್ದಾರೆ.
ಆರ್‌ಎಸ್‌ಎಸ್ ಕಾರ್ಯಕರ್ತರೇ ವೇಷಧರಿಸಿ ಠಾಣೆಗೆ ಕಲ್ಲೆಸೆದಿದ್ದಾರೆ. 50ಕ್ಕೂ ಹೆಚ್ಚು ಆರ್‌ಎಸ್‌ಎಸ್ ಕಾರ್ಯಕರ್ತರು ಗುಂಪಿನೊಂದಿಗೆ ಸೇರಿ ದಾಂಧಲೆ ನಡೆಸಿ ಗಲಭೆ ಹುನ್ನಾರ ನಡೆಸಿದ್ದಾರೆ ಎಂದು ಹೇಳಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಹನುಮ ಧ್ವಜ ಸಮತಿ ಸದಸ್ಯರು ದೂರು ಸಲ್ಲಿಸಿದರು.
ದೇಶಭಕ್ತ ಆರ್‌ಎಸ್‌ಎಸ್ ಸಂಘಟನೆ ಮೇಲೆ ಸುಳ್ಳು ಆರೋಪ ಮಾಡಿರುವ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮಕೈಗೊಳ್ಳಬೇಕು. ತನಿಖೆ ವೇಳೆ ಪೊಲೀಸರು ಲಕ್ಷಣ್ ರನ್ನು ಕರೆದುಕೊಂಡು ಹೋಗುವಂತೆ ಹನುಮ ಧ್ವಜ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))