ಸಾರಾಂಶ
ಖಾಸಗಿ ಶಾಲಾ ವಾಹನಗಳ ಪಾನಪತ್ತ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ಸಂಚಾರ ವಿಭಾಗದ ಪೊಲೀಸರು ನಶೆ ಇಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಖಾಸಗಿ ಶಾಲಾ ವಾಹನಗಳ ಪಾನಪತ್ತ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ಸಂಚಾರ ವಿಭಾಗದ ಪೊಲೀಸರು ನಶೆ ಇಳಿಸಿದ್ದಾರೆ.
ನಗರ ವ್ಯಾಪ್ತಿ ಬೆಳಗ್ಗೆ 7 ರಿಂದ 9.30 ರವರೆಗೆ ಖಾಸಗಿ ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 36 ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಸಂಗತಿ ಪತ್ತೆಯಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ವಾಹನ ತಪಾಸಣೆ ನಡೆದಿದೆ. ಮಕ್ಕಳ ಸುರಕ್ಷತೆ ವಿಚಾರದಲ್ಲಿ ನಿರ್ಲಕ್ಷ್ಯತನ ತೋರಿದ ಆರೋಪದ ಮೇರೆಗೆ ಸಂಬಂಧಪಟ್ಟ ಶಾಲೆಗಳಿಗೆ ಸಹ ಪೊಲೀಸರು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿ ಬಿಸಿ ಮುಟ್ಟಿಸಿದ್ದಾರೆ.ನಗರದಲ್ಲಿ ಬೆಳಗ್ಗೆ 5881 ಖಾಸಗಿ ವಾಹನಗಳ ತಪಾಸಣೆ ನಡೆಸಲಾಯಿತು. ಈ ವೇಳೆ 36 ಪಾನಮತ್ತ ಚಾಲಕರು ಪತ್ತೆಯಾಗಿದ್ದಾರೆ. ಈ ಚಾಲಕರ ಚಾಲನಾ ಪರವಾನಿಗೆ ರದ್ದುಪಡಿಸುವಂತೆ ಸಾರಿಗೆ ಇಲಾಖೆಗೆ ಶಿಫಾಸರು ಮಾಡಲಾಗಿದೆ ಎಂದು ಜಂಟಿ ಆಯುಕ್ತ (ಸಂಚಾರ) ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))