ಚೈತ್ರಾ ಕೇಸ್‌: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್‌

| Published : Oct 11 2023, 12:45 AM IST

ಚೈತ್ರಾ ಕೇಸ್‌: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್‌
Share this Article
  • FB
  • TW
  • Linkdin
  • Email

ಸಾರಾಂಶ

ಉದ್ಯಮಿ ಗೋವಿಂದಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರು. ಪಡೆದು ವಂಚನೆ ಪ್ರಕರಣ ಸಂಬಂಧ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್‌ ನೀಡಿದೆ.
ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕನ್ನಡಪ್ರಭ ವಾರ್ತೆ ಬೆಂಗಳೂರು ಉದ್ಯಮಿ ಗೋವಿಂದಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರು. ಪಡೆದು ವಂಚನೆ ಪ್ರಕರಣ ಸಂಬಂಧ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್‌ ನೀಡಿದೆ. ಪ್ರಕರಣದ ಪ್ರಮುಖ ಆರೋಪಿ ಚೈತ್ರಾಳ ಬಂಧನಕ್ಕೂ ಮುನ್ನ ಆಕೆ ಆದಾಯ ತೆರಿಗೆ ಇಲಾಖೆಗೆ ಉದ್ಯಮಿ ಗೋವಿಂದ ಪೂಜಾರಿ ಅವರ ವ್ಯವಹಾರದ ಕುರಿತು ಬರೆದಿದ್ದಾಳೆ ಎಂಬ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆ ಪತ್ರದಲ್ಲಿ ವಜ್ರದೇಹಿ ಸ್ವಾಮೀಜಿಯ ಹೆಸರು ಪ್ರಸ್ತಾಪವಾಗಿತ್ತು. ಅಂತೆಯೇ ಹಿಂದೂ ಸಂಘಟನೆಗಳ ಜತೆಗೆ ಗುರುತಿಸಿಕೊಂಡಿದ್ದ ಚೈತ್ರಾ ಮತ್ತು ಸ್ವಾಮೀಜಿ ಪರಸ್ಪರ ಪರಿಚಿತರಿದ್ದರು. ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ಗೋವಿಂದ ಪೂಜಾರಿಯಿಂದ ಚೈತ್ರಾ ಹಣ ಪಡೆದಿರುವ ವಿಚಾರ ಸ್ವಾಮೀಜಿಗೆ ಗೊತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ವಜ್ರದೇಹಿ ಸ್ವಾಮೀಜಿಗೆ ನೋಟಿಸ್‌ ನೀಡಿದ್ದಾರೆ ಎಂದು ತಿಳಿದು ಬಂದಿದೆ. ----- ಈಗಾಗಲೇ ಸಿಸಿಬಿ ಪೊಲೀಸರು ಈ ಪ್ರಕರಣ ಸಂಬಂಧ ಚೈತ್ರಾ, ಅಭಿನವ ಹಾಲಶ್ರೀ, ಗಗನ್‌, ಶ್ರೀಕಾಂತ್‌ ಸೇರಿದಂತೆ ಏಳಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.