ಕಂಟೇನರ್ ಲಾರಿ ಕಾರಿಗೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮಹಿಳೆಯರು ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಅಗರಲಿಂಗನ ದೊಡ್ಡಿ ಸಮೀಪ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಜರುಗಿದೆ.
ಮದ್ದೂರು: ಕಂಟೇನರ್ ಲಾರಿ ಕಾರಿಗೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮಹಿಳೆಯರು ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಅಗರಲಿಂಗನ ದೊಡ್ಡಿ ಸಮೀಪ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಜರುಗಿದೆ. ಮೈಸೂರು ಮಂಡಿ ಮೊಹಲ್ಲಾದ ಗಜಲಕ್ಷ್ಮಿ, ಭವಾನಿ, ರಾಧಾ ಹಾಗೂ ಕಾರು ಚಾಲಕ ನಟೇಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದ ಗಾಯಾಳುಗಳಿದ್ದ ಕಾರು
ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದ ಗಾಯಾಳುಗಳಿದ್ದ ಕಾರು ಅಗರಲಿಂಗನ ದೊಡ್ಡಿ ಗ್ರಾಮದ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಚಾಲಕ ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ ಮಾಡಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸ್ಥಳದಲ್ಲೇ ಸಾವು
ಮಳವಳ್ಳಿ: ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶವಾಗಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಐರಿಜಿ ಗ್ರಾಮದ ನಂದೀಶ (25) ಮೃತ ಕಾರ್ಮಿಕ. ಗ್ರಾಮದಲ್ಲಿ ಚೆಸ್ಕಾಂನಿಂದ ಮಾದರಿ ಗ್ರಾಮ ಯೋಜನೆಯಡಿ ಚಿಕ್ಕಕಲ್ಕುಣಿ ರಸ್ತೆಯಲ್ಲಿ ಗುರುವಾರ ಸಂಜೆ ಹಳೆಯ ವಿದ್ಯುತ್ ತಂತಿ ಬದಲಾಯಿಸುವ ಕೆಲಸ ಮಾಡುತ್ತಿದ್ದರು. ವಿದ್ಯುತ್ ಕಂಬವನ್ನೇರಿದ ನಂದೀಶ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಹರಿದು ಘಟನೆ ನಡೆದಿದೆ. ಘಟನೆಯಲ್ಲಿ ಕಂಬದಿಂದ ಏಕಾಏಕಿ ಬಿದ್ದ ನಂದೀಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.