ಸಾರಾಂಶ
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀಸರು, ಐವರು ಸವಾರರನ್ನು ಬಂಧಿಸಿ ಐದು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀಸರು, ಐವರು ಸವಾರರನ್ನು ಬಂಧಿಸಿ ಐದು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.ಎಚ್‌ಎಸ್‌ಆರ್ ಲೇಔಟ್‌ನ ಸಾಗರ್(22), ಮೊಹಮ್ಮದ್ ಬಾಲಾ(23), ರಾಯನ್(20), ಸೈಯದ್ ಅಬ್ಬಾಸ್(27), ನಬೀಸಾದ್(21) ಬಂಧಿತರು.
ಎಚ್‌ಎಸ್‌ಆರ್ ಲೇಔಟ್‌ನ ಅಗರ ಸರ್ಕಾರಿ ಶಾಲೆಯ ಹಿಂಭಾಗ ದ್ವಿಚಕ್ರ ವಾಹನ ವ್ಹೀಲಿಂಗ್ ಹಾಗೂ ರೇಸಿಂಗ್ ಮಾಡುತ್ತಿದ್ದ ಆರೋಪಿಯ ಸಾಗರ್‌ನನ್ನು ಎಚ್‌ಎಸ್‌ಆರ್ ಲೇಔಟ್ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಐಟಿಪಿಎಲ್ ಮುಖ್ಯರಸ್ತೆ ಮತ್ತು ಸೇಂಟ್ ಜಾನ್ಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೊಹಮ್ಮದ್ ಬಾಲಾ ಮತ್ತು ರಾಯನ್ ಎಂಬುವವರನ್ನು ಸಂಚಾರ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪುಲಕೇಶಿನಗರ ಮತ್ತು ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಮಡಿವಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್‌ನಲ್ಲಿ ತೊಡಗಿದ್ದ ಸವಾರರಾದ ಸೈಯದ್ ಅಬ್ಬಾಸ್ ಮತ್ತು ನಬೀಸಾಬ್ ಎಂಬುವವರನ್ನು ಸಂಚಾರ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಮಡಿವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.