ಸಾರಾಂಶ
ಬೆಂಗಳೂರು : ಅಪಘಾತಗಳ ಹಾಟ್‌ಸ್ಪಾಟ್ ಆಗಿದ್ದ ಬೆಂಗಳೂರು-ಮೈಸೂರು ನಡುವಿನ ಆರು ಪಥಗಳ ಎಕ್ಸ್‌ಪ್ರೆಸ್ ವೇನಲ್ಲಿ ಈ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ.
ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಮ್ಮ ‘ಎಕ್ಸ್’ ಖಾತೆಯಲ್ಲಿ ನೀಡಿದ ಮಾಹಿತಿ ಪ್ರಕಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ 2023ರ ಜನವರಿಂದ ಆಗಸ್ಟ್ ವರೆಗೆ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 147 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿಂದ ಆಗಸ್ಟ್ ವರೆಗೆ ಸಂಭವಿಸಿದ ಅಪಘಾತಗಳಲ್ಲಿ 50 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಮೃತರ ಸಂಖ್ಯೆ ಇಳಿಮುಖವಾಗಿದೆ.
ಈ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳ ನಿಯಂತ್ರಣಕ್ಕೆ ರಾಜ್ಯ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದರು. ವಾಹನಗಳ ವೇಗಕ್ಕೆ ಮಿತಿ ನಿಗದಿ, ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ದ್ವಿಚಕ್ರ ವಾಹನಗಳ ಸಂಚಾರ ನಿಷೇಧ, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಪೊಲೀಸರ ವಿಶೇಷ ಕಾರ್ಯಾಚರಣೆ ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಪರಿಣಾಮವಾಗಿ ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹಾಗೂ ಮೃತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ.-ಬಾಕ್ಸ್-
ಅಪಘಾತಗಳಲ್ಲಿ ಮೃತಪಟ್ಟವರ ವಿವರ:
ತಿಂಗಳು20232024
ಜನವರಿ1412
ಫೆಬ್ರವರಿ1706
ಮಾರ್ಚ್2009
ಏಪ್ರಿಲ್2003
ಮೇ2903
ಜೂನ್2709
ಜುಲೈ1006
ಆಗಸ್ಟ್1002
ಒಟ್ಟು14750