ಸಾಲಬಾಧೆ: ವಿಷ ಸೇವಿಸಿ ರೈತ ಆತ್ಮಹತ್ಯೆ..!

| Published : Jul 10 2025, 12:48 AM IST

ಸಾರಾಂಶ

ಮಳವಳ್ಳಿ ತಾಲೂಕಿನ ದೇವಿಪುರ ಗ್ರಾಮದ ರೈತ ಚಿಕ್ಕಣ್ಣ ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ತರಕಾರಿ ಮತ್ತು ಕಬ್ಬು ಬೆಳೆ ಬೆಳೆಯುತ್ತಿದ್ದ ರೈತ ಚಿಕ್ಕಣ್ಣ ಬೆಳೆಗಳಿಗೆ ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ನೊಂದಿದ್ದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಿರುಗಾವಲು ಹೋಬಳಿಯ ದೇವಿಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಜರುಗಿದೆ.

ಗ್ರಾಮದ ರೈತ ಚಿಕ್ಕಣ್ಣ (65) ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ತರಕಾರಿ ಮತ್ತು ಕಬ್ಬು ಬೆಳೆ ಬೆಳೆಯುತ್ತಿದ್ದ ರೈತ ಚಿಕ್ಕಣ್ಣ ಬೆಳೆಗಳಿಗೆ ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ನೊಂದಿದ್ದರು.

ಸಹಕಾರ ಸಂಘ, ಕೆನರಾ ಬ್ಯಾಂಕ್ ಹಾಗೂ ಕೈಸಾಲ ಸೇರಿದಂತೆ ವಿವಿಧೆಡೆ ಸುಮಾರು 6 ಲಕ್ಷ ರು. ಸಾಲ ಮಾಡಿದ್ದ ಅವರು ಸಾಲ ತೀರಿಸಲಾಗದೇ ಮಂಗಳವಾರ ರಾತ್ರಿ ಮೇಕೆಗಳನ್ನು ಕಟ್ಟಿ ಹಾಕುವ ಕೊಟ್ಟಿಗೆಯಲ್ಲಿ ವಿಷ ಸೇವಿಸಿದ್ದರು.

ಸ್ಪಲ್ಪ ಸಮಯದ ನಂತರ ಗಮನಿಸಿದ ಸಂಬಂಧಿಕರು ಕೂಡಲೇ ಮದ್ದೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.