ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ ಡ್ರಂಕ್‌ ಆ್ಯಂಡ್ ಡ್ರೈವ್‌ ವಿರುದ್ಧ 2030 ಪ್ರಕರಣ

| Published : Sep 02 2024, 02:03 AM IST / Updated: Sep 02 2024, 04:57 AM IST

ಸಾರಾಂಶ

ರಾಜಧಾನಿಯಲ್ಲಿ ಡ್ರಂಕ್‌ ಆ್ಯಂಡ್ ಡ್ರೈವ್‌ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ನಗರ ಸಂಚಾರ ಪೊಲೀಸರು ಆಗಸ್ಟ್‌ ತಿಂಗಳಲ್ಲಿ 2,030 ಪಾನಮತ್ತ ಚಾಲಕರು/ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

 ಬೆಂಗಳೂರು : ರಾಜಧಾನಿಯಲ್ಲಿ ಡ್ರಂಕ್‌ ಆ್ಯಂಡ್ ಡ್ರೈವ್‌ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ನಗರ ಸಂಚಾರ ಪೊಲೀಸರು ಆಗಸ್ಟ್‌ ತಿಂಗಳಲ್ಲಿ 2,030 ಪಾನಮತ್ತ ಚಾಲಕರು/ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. 

ನಗರದಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರ ಸಂಚಾರ ಪೊಲೀಸರು ಕಳೆದ ಆ.1ರಿಂದ 31 ರವರೆಗೆ ನಗರದ 50 ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಕುಡಿದು ವಾಹನ ಚಲಾಯಿಸುವ ಸವಾರರು/ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಮದ್ಯ ಸೇವಿಸಿ ವಾಹನ ಚಲಾಯಿಸಿ ಸಿಕ್ಕಿಬಿದ್ದ 2,030 ಚಾಲಕರು/ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಪಾನಮತ್ತರಾಗಿ ವಾಹನ ಚಲಾಯಿಸುವವರ ಹಾವಳಿ ತಡೆಗಟ್ಟಲು ಮತ್ತು ರಸ್ತೆ ಸುರಕ್ಷತೆಗಾಗಿ ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ.