ನಕಲಿ ಶ್ಯೂರಿಟಿ: 9 ಮಂದಿ ಬಂಧನ

| Published : Dec 15 2023, 01:31 AM IST

ಸಾರಾಂಶ

ನಕಲಿ ಶ್ಯೂರಿಟಿ: 9 ಮಂದಿ ಬಂಧನಆಧಾರ್ ಕಾರ್ಡ್‌, ಸ್ವತ್ತಿನ ದಾಖಲೆ ನಕಲಿ ಮಾಡಿ ಭದ್ರತಾ ಠೇವಣಿ

ಆಧಾರ್ ಕಾರ್ಡ್‌, ಸ್ವತ್ತಿನ ದಾಖಲೆ ನಕಲಿ ಮಾಡಿ ಭದ್ರತಾ ಠೇವಣಿ

ಕನ್ನಡಪ್ರಭ ವಾರ್ತೆ ಬೆಂಗಳೂರು

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಪಡೆಯಲು ನ್ಯಾಯಾಲಯಗಳಿಗೆ ನಕಲಿ ದಾಖಲಿ ಸೃಷ್ಟಿಸಿ ಶ್ಯೂರಿಟಿ (ಭದ್ರತಾ ಠೇವಣಿದಾರ) ನೀಡುತ್ತಿದ್ದ ಓರ್ವ ಮಹಿಳೆ ಸೇರಿದಂತೆ 9 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಕೋಲಾರ ಜಿಲ್ಲೆ ಶ್ರೀನಿವಾಸಪುರದ ನಾಗರಾಜ್‌, ಗುಂಟುಪಲ್ಲಿಯ ಆರ್‌.ಮಂಜುನಾಥ್‌ ಸಹ ಸೇರಿದ್ದಾರೆ. ಆರೋಪಿಗಳಿಂದ 35 ನಕಲಿ ಆಧಾರ್ ಕಾರ್ಡ್‌ಗಳು ಹಾಗೂ ಸ್ವತ್ತಿನ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ.ಇತ್ತೀಚೆಗೆ ನ್ಯಾಯಾಲಯಗಳಲ್ಲಿ ಆರೋಪಿಗಳಿಗೆ ಜಾಮೀನು ಪಡೆಯಲು ಕೆಲವರು ನಕಲಿ ದಾಖಲೆ ಸೃಷ್ಟಿಸಿ ಶ್ಯೂರಿಟಿ ನೀಡುತ್ತಿರುವ ಬಗ್ಗೆ ಸಿಸಿಬಿ ಸಂಘಟಿತ ಅಪರಾಧ ದಳದ ಇನ್‌ಸ್ಪೆಕ್ಟರ್‌ ಬಾಲಾಜಿ ತಂಡಕ್ಕೆ ಮಾಹಿತಿ ಸಿಕ್ಕಿದೆ. ಈ ಸುಳಿವು ಆಧರಿಸಿ ಕಾರ್ಯಾಚರಣೆಗಿಳಿದ ಪೊಲೀಸರು, ಮೈಸೂರು ಬ್ಯಾಂಕ್ ವೃತ್ತದ ಬಳಿ ಜೆರಾಕ್ಸ್ ಅಂಗಡಿಗಳಲ್ಲಿ ಜಾಮೀನು ಅರ್ಜಿ ಸಲ್ಲಿಕೆಗೆ ದಾಖಲೆಗಳನ್ನು ಜೆರಾಕ್ಸ್ ಮಾಡಿಸುವಾಗ ಆರೋಪಿಗಳನ್ನು ಬಂಧಿಸಿದ್ದಾರೆ.