ಕೌಟುಂಬಿಕ ಕಲಹ: ಪತ್ನಿ ಹತ್ಯೆಗೈದ ಪತಿಪತ್ನಿ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ

ಪತ್ನಿ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ

ಕನ್ನಡಪ್ರಭ ವಾರ್ತೆ ಮಳವಳ್ಳಿ

ಕೌಟುಂಬಿಕ ಕಲಹದಿಂದ ತನ್ನ ಪತ್ನಿ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಪತಿ ಕೊಲೆ ಮಾಡಿರುವ ಘಟನೆ ತಾಲೂಕಿನ ದೇಶವಳ್ಳಿಯಲ್ಲಿ ನಡೆದಿದೆ.

ಗ್ರಾಮದ ಮಧುಶ್ರೀ (32) ಕೊಲೆಯಾದ ಮಹಿಳೆ. ಮಹದೇವು (38) ಪತ್ನಿಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ. ಕಳೆದ 10 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ 8 ವರ್ಷ ಹಾಗೂ 6 ವರ್ಷದ ಇಬ್ಬರು ಮಕ್ಕಳಿದ್ದಾರೆ. ಆರೋಪಿ ಬನ್ನೂರಿನಲ್ಲಿ ವಾಹನ ಚಾಲಕನ್ನಾಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಮಂಗಳವಾರ ಜಗಳವಾಡುವ ವೇಳೆ ಮಹದೇವು ರಾಡ್‌ನಿಂದ ತನ್ನ ಪತ್ನಿಗೆ ತಲೆಗೆ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮಧುಶ್ರೀ ಸಾವನ್ನಪ್ಪಿದ್ದಾಳೆ. ಆರೋಪಿ ಮಹದೇವು ಪೊಲೀಸ್‌ ಠಾಣೆಗೆ ಆಗಮಿಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಕಿರುಗಾವಲು ಪೊಲೀಸರು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ ವಾರಸುದಾರರಿಗೆ ಒಪ್ಪಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.