ಸಾರಾಂಶ
ಬೆಂಗಳೂರು : ನಗರದಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಅಗ್ನಿ ಅವಘಡ ಪ್ರಕರಣಗಳಲ್ಲಿ ಪೀಠೋಪಕರಣಗಳ ಅಂಗಡಿ ಮತ್ತು ಫೋಟೋ ಫ್ರೇಮ್ ಗೋದಾಮಿನಲ್ಲಿನ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಮಲ್ಲೇಶ್ವರದ ಪ್ಯಾಲೇಸ್ ಗುಟ್ಟಹಳ್ಳಿ ದತ್ತಾತ್ರೇಯ ಟೆಂಪಲ್ ರಸ್ತೆಯ ಫೋಟೋ ಫ್ರೇಮ್ ಗೋದಾಮಿನಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಅವಘಡದಲ್ಲಿ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್‌ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಫರ್ನಿಚರ್ ಅಂಗಡಿಯಲ್ಲಿ ಬೆಂಕಿ:
ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣಪಾಳ್ಯದ ಪೀಠೋಪಕರಣಗಳ ಅಂಗಡಿಯಲ್ಲಿ ಬೆಳಗ್ಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರು. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅಂಗಡಿ ಎದುರು ನಿಲುಗಡೆ ಮಾಡಿದ್ದ ಒಂದು ಟಾಟಾ ಏಸ್ ವಾಹನ ಹಾಗೂ ಎರಡು ಕಾರುಗಳಿಗೆ ಹಾನಿಯಾಗಿದೆ.
ಬೆಳಗ್ಗೆ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ. ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಶಾರ್ಟ್‌ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.