ಏರ್‌ಪೋರ್ಟ್‌ನಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ₹23 ಕೋಟಿ ಮೌಲ್ಯದ ಗಾಂಜಾ ಜಪ್ತಿ: 3 ಸೆರೆ

| Published : Jan 17 2025, 01:45 AM IST / Updated: Jan 17 2025, 04:22 AM IST

ಏರ್‌ಪೋರ್ಟ್‌ನಲ್ಲಿ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ₹23 ಕೋಟಿ ಮೌಲ್ಯದ ಗಾಂಜಾ ಜಪ್ತಿ: 3 ಸೆರೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದೇಶದಿಂದ ಅಕ್ರಮವಾಗಿ ಹೈಡ್ರೋಫೋನಿಕ್ಸ್‌ ಗಾಂಜಾ ಸಾಗಿಸುತ್ತಿದ್ದ ಮೂವರು ಪ್ರಯಾಣಿಕರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ 23 ಕೋಟಿ ರು. ಮೌಲ್ಯದ 23 ಕೆ.ಜಿ. ಗಾಂಜಾ ಜಪ್ತಿ ಮಾಡಿದ್ದಾರೆ.

 ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಹೈಡ್ರೋಫೋನಿಕ್ಸ್‌ ಗಾಂಜಾ ಸಾಗಿಸುತ್ತಿದ್ದ ಮೂವರು ಪ್ರಯಾಣಿಕರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳಿಂದ ಬರೋಬ್ಬರಿ 23 ಕೋಟಿ ರು. ಮೌಲ್ಯದ 23 ಕೆ.ಜಿ. ಗಾಂಜಾ ಜಪ್ತಿ ಮಾಡಿದ್ದಾರೆ.

ಬ್ಯಾಂಕಾಕ್‌ನಿಂದ ಜ.9ರಂದು ಕೆಎಐ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರನ್ನು ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಲಗೇಜ್‌ ಬ್ಯಾಗ್‌ಗಳ ತಪಾಸಣೆ ವೇಳೆ ಅನುಮಾನಾಸ್ಪದ ವಸ್ತು ಇರುವುದು ಕಂಡು ಬಂದಿದೆ. ಬಳಿಕ ಬ್ಯಾಗ್‌ಗಳನ್ನು ವಶಕ್ಕೆ ಪಡೆದು ತಪಾಸಣೆ ಮಾಡಿದಾಗ ವಿವಿಧ ಮಾದರಿಯ 23 ಕೆ.ಜಿ. ಗಾಂಜಾ ಪತ್ತೆಯಾಗಿದೆ.

ಕೂಡಲೇ ಮೂವರು ಪ್ರಯಾಣಿಕರನ್ನು ಬಂಧಿಸಿದ್ದಾರೆ. ಈ ಸಂಬಂಧ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕಸ್ಟಮ್ಸ್‌ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.