ಸಾರಾಂಶ
ಗ್ರಾಪಂಯ ಸದಸ್ಯರೊಬ್ಬರ ಮನೆಯಲ್ಲಿ ಸಿಲಿಂಡರ್ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ತುಂಬಕೆರೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಹನಕೆರೆ ಗ್ರಾಪಂ ಸದಸ್ಯೆ ರಾಣಿ ಎಂಬುವವರ ಮನೆಯಲ್ಲಿ ಸಿಲಿಂಡರ್ ಅನಿಲ ಸೋರಿಕೆಯಿಂದ ಮನೆಯಲ್ಲಿದ್ದ ಸುಮಾರು 1 ಲಕ್ಷ ರು.ಗೂ ಹೆಚ್ಚು ಬೆಲೆಬಾಳುವ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ.ಶನಿವಾರ ಬೆಳಗ್ಗೆ 8.30 ಗಂಟೆಗೆ ಅಡುಗೆ ಮಾಡಲು ಗ್ಯಾಸ್ ಸ್ಟೌವ್ ಗೆ ಬೆಂಕಿ ಹೊತ್ತಿಸಿದಾಗ ಸಿಲಿಂಡರ್ ನಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಮನೆ ಮುಂದಿನ ಬಾಗಿಲು, ಸ್ಕೂಟರ್, ಸೈಕಲ್, ನೀರಿನ ಟ್ಯಾಂಕ್ ಹಾಗೂ ಬಟ್ಟೆಗಳು ಭಾಗಶಃ ಬೆಂಕಿಗೆ ಅಹುತಿಯಾಗಿವೆ.
ಮಂಡ್ಯ: ಗ್ರಾಪಂಯ ಸದಸ್ಯರೊಬ್ಬರ ಮನೆಯಲ್ಲಿ ಸಿಲಿಂಡರ್ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ತುಂಬಕೆರೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಹನಕೆರೆ ಗ್ರಾಪಂ ಸದಸ್ಯೆ ರಾಣಿ ಎಂಬುವವರ ಮನೆಯಲ್ಲಿ ಸಿಲಿಂಡರ್ ಅನಿಲ ಸೋರಿಕೆಯಿಂದ ಮನೆಯಲ್ಲಿದ್ದ ಸುಮಾರು 1 ಲಕ್ಷ ರು.ಗೂ ಹೆಚ್ಚು ಬೆಲೆಬಾಳುವ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ.
ಶನಿವಾರ ಬೆಳಗ್ಗೆ 8.30 ಗಂಟೆಗೆ ಅಡುಗೆ ಮಾಡಲು ಗ್ಯಾಸ್ ಸ್ಟೌವ್ ಗೆ ಬೆಂಕಿ ಹೊತ್ತಿಸಿದಾಗ ಸಿಲಿಂಡರ್ ನಲ್ಲಿ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಮನೆ ಮುಂದಿನ ಬಾಗಿಲು, ಸ್ಕೂಟರ್, ಸೈಕಲ್, ನೀರಿನ ಟ್ಯಾಂಕ್ ಹಾಗೂ ಬಟ್ಟೆಗಳು ಭಾಗಶಃ ಬೆಂಕಿಗೆ ಅಹುತಿಯಾಗಿವೆ.ಘಟನೆಯಲ್ಲಿ ಗ್ರಾಪಂ ಸದಸ್ಯೆ ರಾಣಿ ಹಾಗೂ ಮಕ್ಕಳಿಗೆ ಬೆಂಕಿಯ ತಾಪ ತಗುಲಿ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಗ್ರಾಮಸ್ಥರು ಹೊತ್ತಿ ಉರಿಯುತ್ತಿದ್ದ ಸಿಲಿಂಡರ್ ಅನ್ನು ಮನೆ ಹೊರ ತಂದು ನೀರಿಗೆ ಹಾಕಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ವಿಷಯ ತಿಳಿದ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.