ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಎಳನೀರು ತುಂಬಿದ ಗೂಡ್ಸ್ ಟೆಂಪೋ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಕಾಲೋನಿ ಸಮೀಪದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.ಘಟನೆಯಲ್ಲಿ ತಾಲೂಕು ರುದ್ರಾಕ್ಷಿಪುರ ಗ್ರಾಮದ ಬಿ.ಆರ್.ಮಂಜು ಪುತ್ರ ಎಂ.ಅಜಯ್ ಕುಮಾರ್ (25) ಮೃತಪಟ್ಟ ಬೈಕ್ ಚಾಲಕ. ಅಪಘಾತದಲ್ಲಿ ತಲೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಅಜಯ್ ನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆ ಉಸಿರೆಳೆದಿದ್ದಾನೆ. ಬೈಕ್ ಹಿಂದೆ ಕುಳಿತ್ತಿದ್ದ ಮಂಡ್ಯದ ಇರ್ಫಾನ್ ದೇಹದ ತೊಡೆ ಮತ್ತು ಇತರೆ ಭಾಗಗಳಿಗೆ ಗಾಯಗಳಾಗಿದ್ದು ಈತನನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರು- ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಸಂಜೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಎಳನೀರು ತುಂಬಿದ ಗೂಡ್ಸ್ ಟೆಂಪೋ ವಿರುದ್ಧ ದಿಕ್ಕಿನಿಂದ ಬಂದು ಅಜಯ್ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಸಂಚಾರಿ ಠಾಣೆ ಪಿಎಸ್ಐ ಕಮಲಾಕ್ಷಿ ಪ್ರಕರಣ ದಾಖಲು ಮಾಡಿಕೊಂಡು ಟೆಂಪೋವನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಗಂಭೀರ ಗಾಯ
ಭಾರತೀನಗರ:ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಪಿ.ದೊಡ್ಡಿ ಗ್ರಾಮದ ಬಳಿ ಜರುಗಿದೆ. ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ಹರೀಶ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ.ಕಳೆದ ರಾತ್ರಿ ಸುಮಾರು 9.30ರ ಸಮಯದಲ್ಲಿ ಬೈಕ್‌ನಿಂದ ಮಳವಳ್ಳಿ ಕಡೆಯಿಂದ ಕೆ.ಎಂ.ದೊಡ್ಡಿಗೆ ಬರುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಹೊಡೆದು ಸ್ಥಳದಿಂದ ಪರಾರಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೆ.ಎಂ. ದೊಡ್ಡಿ ಆಸ್ಟರ್ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಗಾಯಗೊಂಡ ಹರೀಶ್ ಅವರ ಬೈಕ್ ಅಪಘಾತ ನಡೆದ ಸ್ಥಳದಲ್ಲೇ ಇದೆ. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
;Resize=(128,128))
;Resize=(128,128))
;Resize=(128,128))
;Resize=(128,128))