ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಹೆಮ್ಮನಹಳ್ಳಿ ಗೇಟ್ ಸಮೀಪದ ಮೈಸೂರು ರಸ್ತೆಯಲ್ಲಿ ನಡೆದಿದೆ.
ಕೆ.ಆರ್.ಪೇಟೆ:
ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿರುವ ಘಟನೆ ಪಟ್ಟಣದ ಹೊರವಲಯದ ಹೆಮ್ಮನಹಳ್ಳಿ ಗೇಟ್ ಸಮೀಪದ ಮೈಸೂರು ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.ತಾಲೂಕಿನ ಮುರುಕನಹಳ್ಳಿಯ ಯುವಕ ರಕ್ಷಿತ್ (21) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಕ್ಷಿತ್ ನನ್ನು ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮುಂಜಾನೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆದಿದ್ದಾರೆ. ಅಪಘಾತದಲ್ಲಿ ಮತ್ತೋರ್ವ ಬೈಕ್ ಸವಾರ ಪ್ರಮೋದ್ ಸ್ಥಿತಿಯೂ ಗಂಭೀರವಾಗಿದ್ದು, ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ರಭಸಕ್ಕೆ ಎರಡೂ ಬೈಕ್‌ಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಕಾರಿನ ಚಕ್ರದ ಟೈರ್ ಸಿಡಿದು ಬೈಕ್‌ಗೆ ಡಿಕ್ಕಿ: ಸವಾರ ಸಾವು, ಮಹಿಳೆಗೆ ಗಾಯ
ಪಾಂಡವಪುರ: ಕಾರಿನ ಚಕ್ರದ ಟೈರ್ ಸಿಡಿದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿ, ಮಹಿಳೆ ಗಾಯಗೊಂಡಿರುವ ಘಟನೆ ತಾಲೂಕಿನ ಚಿನಕುರಳಿ- ಹುಳಿಗೆರೆ ಗ್ರಾಮಗಳ ಬಳಿ ನಡೆದಿದೆ.ತಾಲೂಕಿನ ದುದ್ದ ಹೋಬಳಿ ಬೆಟ್ಟಹಳ್ಳಿಯ ಚಿಕ್ಕಹಲಗಯ್ಯ (70) ಅಪಘಾತದಲ್ಲಿ ಮೃತಪಟ್ಟವರು. ಮೃತರ ಪುತ್ರಿ ಶೋಭ ಗಾಯಗೊಂಡಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹುಳಿಗೆರೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಚಲಿಸುತ್ತಿದ್ದ ವೇಳೆ ಕಾರಿನ ಟೈರ್ ಸಿಡಿದು ಪಕ್ಕದಲ್ಲೇ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಿಕ್ಕಹಲಗಯ್ಯ ಅವರು ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರ ಪುತ್ರಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಯಿತು.ಮುದಗಂದೂರು ಗ್ರಾಪಂ ಮಾಜಿ ಅಧ್ಯಕ್ಷರಾಗಿ, ಮಂಡಲ ಪಂಚಾಯ್ತಿ ಮಾಜಿ ಸದಸ್ಯರೂ ಆಗಿದ್ದ ಚಿಕ್ಕಹಲಗಯ್ಯ ಅವರು, ದಲಿತ ಸಂಘರ್ಷ ಸಮಿತಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕೆಲಸ ಮಾಡಿದ್ದರು. ಮೃತರು ಪತ್ನಿ, ಓಬ್ಬ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಇಂದು (ಜು.16) ಬೆಳಗ್ಗೆ 11 ಗಂಟೆಗೆ ಬೆಟ್ಟಹಳ್ಳಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಭಾರತೀಯ ರೆಡ್‌ಕ್ರಾಸ್ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ದಸಂಸ ಮುಖಂಡ ಕೃಷ್ಣ ಜಿ.ಮಲ್ಲಿಗೆರೆ ಇತರರು ಸಂತಾಪ ಸೂಚಿಸಿದ್ದಾರೆ.