ದಂಪತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಆರ್‌.ಟಿ. ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಡೇವಿಡ್ ಹಾಗೂ ಸುಮಿತ್ರಾ ಮೃತಪಟ್ಟವರು. ಪತ್ನಿ ಕೊಂದ ಪತಿ ತಾನು ಆತ್ಮ*ತ್ಯೆ ಮಾಡಿಕೊಂಡಿರುವ ಶಂಕೆಯಿದೆ.

 ಬೆಂಗಳೂರು : ದಂಪತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಆರ್‌.ಟಿ. ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಡೇವಿಡ್ (35) ಹಾಗೂ ಸುಮಿತ್ರಾ (30) ಮೃತಪಟ್ಟವರು. ಪತ್ನಿಯನ್ನು ಕೊಂದ ಬಳಿಕ ಪತಿ ತಾನು ಆತ್ಮ*ತ್ಯೆ ಮಾಡಿಕೊಂಡಿರುವ ಶಂಕೆಯಿದ್ದು, ಈ ಸಂಬಂಧ ಕೊಲೆ ಪ್ರಕರಣ ಮತ್ತು ಅಸ್ವಾಭಾವಿಕ ಸಾವು ಪ್ರಕರಣ(ಯುಡಿಆರ್‌) ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಘಟನೆ ಯಾವಾಗ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ

ಈ ಘಟನೆ ಯಾವಾಗ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಬುಧವಾರ ಮಧ್ಯಾಹ್ನ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾಗ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲ ವರ್ಷಗಳ ಹಿಂದೆ ಡೇವಿಡ್‌ ಮತ್ತು ಸುಮಿತ್ರಾ ಪ್ರೀತಿಸಿ ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಡೇವಿಡ್‌ ಚಾಲಕನಾಗಿದ್ದರು. ಸುಮಿತ್ರಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿಯು ಆರ್‌.ಟಿ ನಗರದ, ಗಂಗೇನಹಳ್ಳಿಯ ಅಂಬೇಡ್ಕರ್‌ ಕಾಲೋನಿಯ ಮನೆವೊಂದರಲ್ಲಿ ವಾಸವಾಗಿದ್ದರು. ದಂಪತಿ ಮಧ್ಯೆ ಆಗಾಗ್ಗೆ ಜಗಳ ನಡೆಯುತ್ತಿತ್ತು.

ಇದೇ ರೀತಿ ಮಂಗಳವಾರ ರಾತ್ರಿಯೂ ಗಲಾಟೆ ನಡೆದಿದೆ ಎನ್ನಲಾಗಿದೆ. ಗಲಾಟೆಯ ವಿಚಾರ ತಿಳಿದ ಮಹಿಳೆಯ ಸಹೋದರ ಮಕ್ಕಳನ್ನು ತನ್ನ ಮನೆಗೆ ಕರೆದೊಯ್ದಿದ್ದಾರೆ. ನಂತರ ದಂಪತಿಯ ನಡುವೆ ಮತ್ತೆ ಗಲಾಟೆಯಾಗಿದ್ದು, ಈ ವೇಳೆ ಆಕ್ರೋಶಗೊಂಡ ಪತಿ, ಪತ್ನಿಯನ್ನು ಕೊಂದು ಬಳಿಕ ತಾನು ನೇಣುಬಿಗಿದುಕೊಂಡು ಆತ್ಮ*ತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಪೊಲೀಸರು ಹಾಗೂ ಸೊಕೋ ಟೀಂ ತಂಡ ಪರಿಶೀಲನೆ

ಸ್ಥಳಕ್ಕೆ ಆರ್‌.ಟಿ. ನಗರ ಠಾಣೆ ಪೊಲೀಸರು ಹಾಗೂ ಸೊಕೋ ಟೀಂ ತಂಡ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಇದು ಕೊಲೆಯೋ ಅಥವಾ ಆತ್ಮ*ತ್ಯೆಯೋ ಎಂಬುದು ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಆರ್‌.ಟಿ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ದಂಪತಿಗಳಾದ ಡೇವಿಡ್‌ ಮತ್ತು ಸುಮಿತ್ರಾ ಪ್ರೀತಿಸಿ ವಿವಾಹವಾಗಿದ್ದರು- ಡೇವಿಡ್‌ ಚಾಲಕನಾಗಿದ್ದ. ಸುಮಿತ್ರಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು- ದಂಪತಿ ಗಂಗೇನಹಳ್ಳಿಯ ಅಂಬೇಡ್ಕರ್‌ ಕಾಲೋನಿಯ ಮನೆಯಲ್ಲಿ ವಾಸವಿದ್ದರು- ಆಗಾಗ್ಗೆ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಜಗಳ ವಿಕೋಪಕ್ಕೆ ತಿರುಗಿದೆ- ಆಕ್ರೋಶಗೊಂಡ ಡೇವಿಡ್‌ ಪತ್ನಿ ಕೊಂದು ತಾನೂ ನೇಣಿಗೆ ಶರಣಾಗಿರುವ ಶಂಕೆ