2024ರಲ್ಲಿ ದೇಶದಲ್ಲಿ ನಡೆದ ಆತ್ಮ*ತ್ಯೆ ಪ್ರಕರಣಗಳಲ್ಲಿ ರಾಷ್ಟ್ರರಾಜಧಾನಿ ದೆಹಲಿ ಮೊದಲ ಸ್ಥಾನದಲ್ಲಿದ್ದು, ಇಲ್ಲಿ 2905 ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ. ಸಿಲಿಕಾನ್ ಸಿಟಿ ಬೆಂಗಳೂರು 2ನೇ ಸ್ಥಾನದಲ್ಲಿದ್ದು 2403 ಜನರು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ ಎಂದು ಸರ್ಕಾರಿ ಅಂಕಿ-ಅಂಶ ಹೇಳಿದೆ.
ನವದೆಹಲಿ: 2024ರಲ್ಲಿ ದೇಶದಲ್ಲಿ ನಡೆದ ಆತ್ಮ*ತ್ಯೆ ಪ್ರಕರಣಗಳಲ್ಲಿ ರಾಷ್ಟ್ರರಾಜಧಾನಿ ದೆಹಲಿ ಮೊದಲ ಸ್ಥಾನದಲ್ಲಿದ್ದು, ಇಲ್ಲಿ 2905 ಆತ್ಮ*ತ್ಯೆ ಘಟನೆ ಬೆಳಕಿಗೆ ಬಂದಿದೆ. ಸಿಲಿಕಾನ್ ಸಿಟಿ ಬೆಂಗಳೂರು 2ನೇ ಸ್ಥಾನದಲ್ಲಿದ್ದು 2403 ಜನರು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ ಎಂದು ಸರ್ಕಾರಿ ಅಂಕಿ-ಅಂಶ ಹೇಳಿದೆ.
53 ನಗರಗಳಲ್ಲಿ ಸಮೀಕ್ಷೆ ನಡೆಸಿ ವರದಿ
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದೇಶದ ಪ್ರಮುಖ 53 ನಗರಗಳಲ್ಲಿ ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿದೆ. ಈ ಪ್ರಕಾರ 2905 ಆತ್ಮ*ತ್ಯೆ ಪ್ರಕರಣಗಳೊಂದಿಗೆ ದೆಹಲಿ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು 2403 ಘಟನೆಗಳೊಂದಿಗೆ ಎರಡನೇ ಸ್ಥಾನ ಪಡೆದಿದೆ. ಮುಂಬೈನಲ್ಲಿ 1406 ಕೇಸ್ ದಾಖಲಾಗಿದೆ.
ಮರಣ ದರದಲ್ಲಿ ಬೆಂಗಳೂರು ನಂ.1:
ಆದರೆ ಜನಸಂಖ್ಯೆಗೆ ಅನುಗುಣವಾಗಿ ಈ ನಗರಗಳ ಮರಣ ದರವನ್ನು (ಪ್ರತಿ 1 ಲಕ್ಷ ಜನಸಂಖ್ಯೆಗೆ) ಗಮನಿಸಿದರೆ ಬೆಂಗಳೂರು ಶೇ.16.7 ದರದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ದೆಹಲಿ ಶೇ.13.2 ಮರಣ ದರದೊಂದಿಗೆ 2ನೇ ಸ್ಥಾನದಲ್ಲಿದೆ. ಆದರೆ ಈ ಎರಡು ಪ್ರಮುಖ ನಗರಗಳಲ್ಲಿ 2023ಕ್ಕೆ ಹೋಲಿಸಿದರೆ ಆತ್ಮ*ತ್ಯೆ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ಮಹಿಳೆಯರಿಗೆ ಹೋಲಿಸಿದರೆ ಪುರುಷರೇ ಹೆಚ್ಚು ಆತ್ಮಹತ್ಯೆ ಶರಣಾಗಿದ್ದು, ಕೌಟುಂಬಿಕ ಸಮಸ್ಯೆ, ನಿರುದ್ಯೋಗ ಪ್ರಮುಖ ಕಾರಣ ಎಂದು ವರದಿ ಹೇಳಿದೆ. ಇನ್ನು ಆತ್ಮ*ತ್ಯೆ ಮಾಡಿಕೊಂಡವರಲ್ಲಿ ಹೆಚ್ಚಿನವರು ವಿವಾಹಿತರು ಎಂದು ಅಂಕಿ ಅಂಶ ಹೇಳಿದ್ದು, ದೆಹಲಿಯಲ್ಲಿ ಒಟ್ಟು 1616 ವಿವಾಹಿತರು ಸಾವಿಗೆ ಶರಣಾಗಿದ್ದಾರೆ. ಅದರಲ್ಲಿ 1162 ಪುರುಷರೇ ಇದ್ದಾರೆ ಎಂದಿದೆ.
