ಸಾರಾಂಶ
ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದಾಬಸ್‌ಪೇಟೆ: ಬೈಕಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ನಡೆದಿದೆ. ತುಮಕೂರು ಮೂಲದ ಅಭಿಷೇಕ್ (28) ಮೃತ ದುರ್ದೈವಿಯಾಗಿದ್ದು, ಈತ ಬೆಂಗಳೂರಿಂದ ಮುದೋಳಕ್ಕೆ ತೆರಳುತ್ತಿದ್ದನು.
ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅಭಿಷೇಕ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಘಟನೆಯಿಂದ ತುಮಕೂರಿನ ರಸ್ತೆ ಕೆಲಕಾಲ ವಾಹನ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ಬಗ್ಗೆ ಮಾಹಿತಿ ತಿಳಿದ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.