ಪ್ರೇಮಿಗಳ ವಿವಾಹ: ಯುವಕನ ಪೋಷಕರ ಮೇಲೆ ಹಲ್ಲೆ

| Published : Dec 19 2023, 01:45 AM IST

ಸಾರಾಂಶ

ಪ್ರೇಮಿಗಳ ವಿವಾಹ ಹಿನ್ನೆಲೆಯಲ್ಲಿ ಯುವತಿಯ ಕುಟುಂಬಸ್ಥರಿಂದ ಹಲ್ಲೆ, ಗಾಯಾಳುಗಳು ಆಸ್ಪತ್ರೆಗೆ ದಾಖಲು, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ.

ಕನ್ನಡಪ್ರಭ ವಾರ್ತೆ ಗುಡಿಬಂಡೆತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಮತ್ತು ಅಂಕಿತಾ ಎಂಬ ಪ್ರೇಮಿಗಳು ಮನೆ ಬಿಟ್ಟು ಓಡಿಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಅಂಕಿತಾ ಕುಟುಂಬಸ್ಥರು ಯುವಕನ ತಂದೆ- ತಾಯಿ ಮನೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುಮಾರು ದಿನಗಳಿಂದ ಪ್ರೀತಿಸುತ್ತಿದ್ದ ಮನೋಜ್ ಹಾಗೂ ಅಂಕಿತಾ ಕಳೆದ ಭಾನುವಾರ ದೇವಾಲಯವೊಂದರಲ್ಲಿ ಮದುವೆಯಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಅಂಕಿತಾ ಕುಟುಂಬಸ್ಥರು ಸೋಮವಾರ ಮಧ್ಯಾಹ್ನ ಯುವಕನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಮನೋಜ್ ತಾಯಿ ವೆಂಕಟಲಕ್ಷ್ಮಮ್ಮ ಹಾಗೂ ತಂದೆ ಗಂಗರಾಜು ಎಂಬುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

ಗಾಯಾಳುಗಳನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯುವಕ ಯುವತಿ ಪರಾರಿಯಾಗಲು ಯುವಕನ ಪೋಷಕರು ಬೆಂಬಲ ನೀಡಿದ್ದಾರೆ ಎಂಬ ಆಕ್ರೋಷ ಹಲ್ಲೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ದಾಖಲಾಗಿದೆ.

ಕೆಲವು ದಿನಗಳ ಹಿಂದೆಯಷ್ಟೆ ಬೆಳಗಾವಿಯಲ್ಲಿ ಪ್ರೇಮವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಗುಡಿಬಂಡೆಯ ದಪ್ಪರ್ತಿ ಗ್ರಾಮದಲ್ಲಿ ಅಂತಹುದೇ ಘಟನೆ ನಡೆದಿದೆ.18ಜಿಯುಡಿ2: ಪ್ರೀತಿಸಿ ಮದುವೆಯಾದ ಮನೋಜ್ ಹಾಗೂ ಅಂಕಿತಾ.

18ಜಿಯುಡಿ3: ಮನೋಜ್ ಪೋಷಕರ ಮೇಲೆ ಹಲ್ಲೆ ನಡೆದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.