ಮದ್ದೂರು:

ಬೈಕ್ ಅಪಘಾತದಲ್ಲಿ ಬೆಂಗಳೂರು ಮೂಲದ ಸಾಫ್ಟ್ ವೇರ್ ಕಂಪನಿ ಉದ್ಯೋಗಿ ಮೃತಪಟ್ಟಿರುವ ಘಟನೆ ತಾಲೂಕಿನ ತೈಲೂರುಕೆರೆ ಸಮೀಪದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮಧ್ಯರಾತ್ರಿ ಜರುಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಅಜ್ವಾರ ಗ್ರಾಮದ ಜಗದೀಶ್ ಪುತ್ರ ನಿಕೇಶ್ (32) ಮೃತಪಟ್ಟ ಸಾಫ್ಟ್ ವೇರ್ ಉದ್ಯೋಗಿ. ಬೆಂಗಳೂರಿನ ಐಟಿಐ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ನಿಕೇಶ್ ವಾರದ ರಜೆ ಕಾರಣ ಶನಿವಾರ ಬೆಂಗಳೂರಿನಿಂದ ತಮ್ಮ ಬೈಕ್‌ನಲ್ಲಿ ಮೈಸೂರು ಕಡೆಗೆ ಬರುತ್ತಿದ್ದರು. ಮಧ್ಯರಾತ್ರಿ 12.45ರ ಸುಮಾರಿಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬೈಕ್‌ನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

ತಕ್ಷಣ ನಿಕೇಶ್ ಅವರನ್ನು ಮದ್ದೂರು ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ವೇಳೆಗೆ ಕೊನೆ ಉಸಿರೆಳೆದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮದ್ದೂರು ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಣಿಪಾಲ್ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸುದಾರರ ವಶಕ್ಕೆ ಒಪ್ಪಿಸಲಾಯಿತು.ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಹದೇವಪ್ಪ, ಸುನೀಲ್ ಬೋಸ್


ಕನ್ನಡಪ್ರಭ ವಾರ್ತೆ ಮಂಡ್ಯಹಲಗೂರು ಸಮೀಪದ ಕನಕಪುರ- ಮಳವಳ್ಳಿ ರಾಷ್ಟ್ರೀಯ ಹೆದ್ದಾರಿಯ ಡಿ.ಹಲಸಹಳ್ಳಿ ಬಳಿ ಖಾಸಗಿ ಬಸ್‌ಗಳು ಹಾಗೂ ಟೆಂಪೋ ನಡುವೆ ನಡೆದ ಸರಣಿ ಅಪಘಾತದಲ್ಲಿ ಗಾಯಗೊಂಡು ನಗರದ ಮಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಚಾಮರಾಜನಗರ ಸಂಸದ ಸುನಿಲ್‌ಬೋಸ್ ಸಾಂತ್ವನ ಹೇಳಿದರು.

ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿದರು. ಗಾಯಾಳುಗಳ ಆರೋಗ್ಯದ ಬಗ್ಗೆ ಸಂಬಂಧಿಸಿದ ವೈದ್ಯರಿಂದ ಮಾಹಿತಿ ಪಡೆದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹದೇವಪ್ಪ, ಘಟನೆಯಿಂದ ಯಾರಿಗೂ ಪ್ರಾಣಾಪಾಯವಾಗಿಲ್ಲ. ಎಲ್ಲರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಸೂಕ್ತ ಚಿಕಿತ್ಸೆ ನೀಡಲು ಸೂಚನೆ ಕೊಟ್ಟಿದ್ದೇನೆ ಎಂದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಕೆ.ಎಚ್.ಲವ, ದೀಪಕ್ ಕೆ.ಎನ್., ಚಂದಗಾಲು ವಿಜಯಕುಮಾರ್ ಸೇರಿದಂತೆ ಇತರರು ಇದ್ದರು.