ಸಾರಾಂಶ
ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗಿ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದೀಗ ಇಂತಹದೇ ಘಟನೆಯೊಂದು ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪೀಣ್ಯ ದಾಸರಹಳ್ಳಿ : ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗಿ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದೀಗ ಇಂತಹದೇ ಘಟನೆಯೊಂದು ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾನು ದಪ್ಪಗಿರುವುದಕ್ಕೆ ಹುಡುಗಿ ಸಿಗುತ್ತಿಲ್ಲವೆಂದು ಯುವಕನೊಬ್ಬ ಸಾವಿಗೆ ಶರಣಾಗಿದ್ದಾನೆ.
ಬೆಂಗಳೂರು ಉತ್ತರ ತಾಲೂಕಿನ ನಾರಾಯಣಪ್ಪನಪಾಳ್ಯದ ನಿವಾಸಿ ವೆಂಕಟೇಶ್ (29) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಗೋವಿಂದರಾಜು ಮತ್ತು ಮಂಗಳಮ್ಮ ದಂಪತಿ ಪುತ್ರ ವೆಂಕಟೇಶ್ ಅವರು ಮದುವೆಯಾಗಲು ಸುಮಾರು 15 ಹುಡುಗಿಯರನ್ನ ನೋಡಿದ್ದರು. ಎಲ್ಲಾ ಹುಡುಗಿಯರ ಪೋಷಕರು ಹುಡುಗ ದಪ್ಪಗಿದ್ದಾನೆಂದು ನಿರಾಕರಿಸಿದ್ದರು. ಇದರಿಂದ ಮನನೊಂದು ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಶರಣಾಗಿದ್ದಾರೆ. ಎಷ್ಟೇ ಫೋನ್ ಮಾಡಿದರು ಕರೆ ಸ್ವೀಕರಿಸದ್ದಕ್ಕೆ ಚಿಕ್ಕಮ್ಮ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.