ಸಾರಾಂಶ
ಆಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಳವಳ್ಳಿ ಪಟ್ಟಣದಲ್ಲಿನಡೆದಿದೆ.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಆಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿನಡೆದಿದೆ. ಪಟ್ಟಣದ ಲೇ.ಮಹದೇವರ ಪುತ್ರ ಶಿವು (28) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.ಪಟ್ಟಣದ ಗಂಗಾಮತ ಬೀದಿಯಲ್ಲಿ ಗಣೇಶಮೂರ್ತಿ ಕೂರಿಸಲು ವೇದಿಕೆ ನಿರ್ಮಾಣ ಮಾಡಲು ಮಣ್ಣು ತರಲು ಹೋಗಿದ್ದ ಶಿವು ಆಟೋದಲ್ಲಿ ವಾಪಸ್ ಬರುತ್ತಿದ್ದ ವೇಳೆ ಪಟ್ಟಣದ ಬೀರೇಶ್ವರ ದೇವಸ್ಥಾನ ರಸ್ತೆ ಬಳಿ ಭಾನುವಾರ ಮಧ್ಯಾಹ್ನ ಆಟೋ ಉರುಳಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ನಂತರ ಗಾಯಾಳುವಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೂಡ್ಸ್ ಟೆಂಪೋ ಡಿಕ್ಕಿ: ಮುರಿದು ಬಿದ್ದ ವಿದ್ಯುತ್ ಕಂಬಗಳುಮಳವಳ್ಳಿ:
ಗೂಡ್ಸ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಎರಡು ಕಂಬಗಳು ಮುರಿದು ಬಿದ್ದಿರುವ ಘಟನೆ ತಾಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದೆ.ತಾಲೂಕಿನ ಕಿರುಗಾವಲಿನಿಂದ ತಿ.ನರಸೀಪುರ ಕಡೆಗೆ ಹೊರಟಿದ್ದ ಗೂಡ್ಸ್ ಟೆಂಪೋ ಕಲ್ಕುಣಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಎರಡು ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಕಂಬಗಳು ಮುರಿದು ಹೋಗಿದೆ. ಅಲ್ಲದೇ, ವಿದ್ಯುತ್ ತಂತಿಗಳು ಸಹ ತುಂಡಾಗಿ ಬಿದ್ದಿವೆ. ಘಟನೆಯಲ್ಲಿ ಟೆಂಪೋದಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಘಟನೆಯಿಂದ ಕಲ್ಕುಣಿ ಭಾಗದ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡು ವಿದ್ಯುತ್ ಇಲ್ಲದಂತಾಗಿತ್ತು. ನಂತರ ನೌಕರರು ದುರಸ್ಥಿ ಕಾರ್ಯ ಕೈಗೊಂಡು ವಿದ್ಯುತ್ ಕಲ್ಪಿಸಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.