ಸಾರಾಂಶ
ಮದ್ದೂರು : ಕಂಟೈನರ್ ಲಾರಿಗೆ ಮಿನಿ ಗೂಡ್ಸ್ ಟೆಂಪೋ ಹಿಂದಿನಿಂದ ಡಿಕ್ಕಿಯಾಗಿ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಗಿನ ಜಾವ ಜರುಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಯಮ್ಮಡಹಳ್ಳಿಯ ಲೋಕನಾಥ್ (38) ಮೃತಪಟ್ಟ ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲೋಕನಾಥ್ ಸ್ಥಳದಲ್ಲಿಯೇ ಅಸು ನೀಗಿದ್ದಾನೆ. ಬೆಂಗಳೂರಿಂದ ಮೈಸೂರಿಗೆ ಆನ್ಲೈನ್ ನಲ್ಲಿ ಗ್ರಾಹಕರು ಬುಕ್ ಮಾಡಿದ್ದ ವಿವಿಧ ವಸ್ತುಗಳನ್ನು ಗೂಡ್ಸ್ ಟೆಂಪೋದಲ್ಲಿ ಸಾಗಿಸಲಾಗುತ್ತಿತ್ತು.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೀನುಗಾರಿಕೆ ಇಲಾಖೆ ಸಮೀಪದ ಮೇಲು ಸೇತುವೆ ಮೇಲೆ ಮುಂದೆ ಸಾಗುತ್ತಿದ್ದ ಕಂಟೈನರ್ ಚಾಲಕ ತನ್ನವಾಹನವನ್ನು ಏಕಾಏಕಿ ಬಲಕ್ಕೆ ತಿರುಗಿಸಿದ ಪರಿಣಾಮ ಟೆಂಪೋ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಾಗೇಂದ್ರಸ್ವಾಮಿ ನಿಧನ
ಹಲಗೂರು: ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದ ನಿವಾಸಿ ಹರ್ಷವರ್ಧನ್ ಹೋಟೆಲ್ ಮಾಲೀಕ ನಾಗೇಂದ್ರ ಸ್ವಾಮಿ (50) ಹೃದಯಾಘಾತದಿಂದ ಗುರುವಾರ ಬೆಳಗ್ಗೆ ನಿಧನರಾದರು. ಮೃತರಿಗೆ ತಾಯಿ, ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಸಂಜೆ ನೆರವೇರಿತು.