ಸಾರಾಂಶ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಮಹಿಳಾ ಆಯೋಗ, ಎಸ್ಟಿ ಆಯೋಗ ಮತ್ತು ಬಿಜೆಪಿ ಸತ್ಯಶೋಧನಾ ಸಮಿತಿ ಬಳಿಕ ಇದೀಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಬೆಳಗಾವಿಗೆ ಭೇಟಿ ನೀಡಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಹೊಸವಂಟಮೂರಿ ಗ್ರಾಮಕ್ಕೆ ಕೇಂದ್ರ ಮಹಿಳಾ ಆಯೋಗ, ಎಸ್ಟಿ ಆಯೋಗ ಮತ್ತು ಬಿಜೆಪಿ ಸತ್ಯಶೋಧನಾ ಸಮಿತಿ ಬೆನ್ನಲ್ಲೇ ಇದೀಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಬೆಳಗಾವಿಗೆ ಭೇಟಿ ನೀಡಿದೆ.ಭಾನುವಾರ ನಗರಕ್ಕೆ ಆಗಮಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮೂವರು ಸದಸ್ಯರು ಡಿ.10ರಂದು ನಡೆದಿದ್ದ ಅಮಾನವೀಯ ಘಟನೆ ಕುರಿತು ಡಿವೈಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿಂದ ಮಾಹಿತಿ ಸಂಗ್ರಹಿಸಿದೆ.ಸದ್ಯ ಬೆಳಗಾವಿಯಲ್ಲೇ ಉಳಿದುಕೊಂಡಿರುವ ಮೂವರು ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯಿಂದಲೂ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ.