ಬಲಮುರಿ ಪ್ರವಾಸಿ ತಾಣದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಒಡಿಶಾ ಮೂಲದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಜ್ಞಾನಂಜನೆಯಾ ನಾಯಕ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಪೆರಿ ಗ್ರೀನ್ ಎಂಬ ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ.

ಶ್ರೀರಂಗಪಟ್ಟಣ:

ಬಲಮುರಿ ಪ್ರವಾಸಿ ತಾಣದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಒಡಿಶಾ ಮೂಲದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಜ್ಞಾನಂಜನೆಯಾ ನಾಯಕ್ (29) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಪೆರಿ ಗ್ರೀನ್ ಎಂಬ ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದನು. ತಮ್ಮ ಸಹೋದ್ಯೋಗಿಗಳೊಂದಿಗೆ ಬಲಮುರಿಗೆ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ. ಸ್ನೇಹಿತರೊಂದಿಗೆ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಜ್ಞಾನಂಜನೆಯಾ ನಾಯಕ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಸ್ನೇಹಿತರು ಹಾಗೂ ಸ್ಥಳೀಯರು ರಕ್ಷಣೆಗೆ ಮುಂದಾದರೂ ಯುವಕನನ್ನು ಉಳಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಕೆ.ಆರ್.ಎಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.ಸ್ಕೂಟರ್‌ಗೆ ಕಾರು ಡಿಕ್ಕಿ: ಮಹಿಳೆ ಸಾವು

ಶ್ರೀರಂಗಪಟ್ಟಣ:

ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ಮೃತಪಟ್ಟಿರುವ ಘಟನೆ ಕೆ.ಆರ್.ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಾಂಡವಪುರ ತಾಲೂಕಿನ ಬೇವಿನಕುಪ್ಪೆ ಗ್ರಾಮದ ಬಿ.ಜಿ.ಯೋಗಣ್ಣರ ಪತ್ನಿ ಶಕುಂತಲಾ (50) ಮೃತ ಮಹಿಳೆ.

ಶಕುಂತಲಾ ಅವರು ಪತಿಯೊಂದಿಗೆ ಸ್ಕೂಟರ್‌ನಲ್ಲಿ ಗೌರಿ ಗಣೇಶ ಹಬ್ಬಕ್ಕೆ ಬಟ್ಟೆ ತರಲು ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಶಕುಂತಲಾ ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಬಿ.ಜಿ ಯೋಗಣ್ಣ ಅವರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.