ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಬಿ.ದಯಾನಂದ್ ಸೇರಿ ಐವರು ಪೊಲೀಸ್ ಅಧಿಕಾರಿಗಳಿಗೆ ವಿಧಿಸಲಾಗಿದ್ದ ಅಮಾನತು ಆದೇಶ ಹಿಂಪಡೆಯುವ ಕುರಿತು ರಾಜ್ಯ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಗುಂಪು ಹತ್ಯೆ ಕೃತ್ಯಗಳ ಸಂಬಂಧ ಎಫ್ಐಆರ್ ದಾಖಲಿಸುವ ಮುನ್ನ ಹಿರಿಯ ಅಧಿಕಾರಿಗಳಿಂದ ಅನುಮೋದನೆ ಪಡೆಯುವಂತೆ ಸೂಚಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಸುತ್ತೋಲೆ ಹೊರಡಿಸಿದ್ದಾರೆ.
ವಿದೇಶದಿಂದ ಕಳ್ಳ ದಾರಿಯಲ್ಲಿ ಮೂರೂವರೆ ಕೆ.ಜಿ ಚಿನ್ನ ಸಾಗಿಸುವಾಗ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬೀಳುವ ಭಯದಲ್ಲಿ ಬೇರೊಬ್ಬ ಪ್ರಯಾಣಿಕರ ಬ್ಯಾಗ್ಗೆ ಚಿನ್ನ ಹಾಕಿ ಕಿಡಿಗೇಡಿ ಪರಾರಿಯಾಗಿರುವ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಭೀಮನ ಅಮಾವಾಸ್ಯೆಯ ದಿನ ಗಂಡನ ಪಾದ ಪೂಜೆ ಮಾಡಿದ ಬಳಿಕ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾ* ಪ್ರಕರಣದಲ್ಲಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಸೆಯಾಗಿದೆ.
ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಅಧಿಕಾರಿಗಳು ಆರಂಭಿಸಿದ್ದಾರೆ.
ಗಂಡನ ಜೊತೆ ಪ್ರತಿದಿನ ಜಗಳಕ್ಕೆ ಬೇಸತ್ತು ಮಹಿಳೆಯೊಬ್ಬಳು ತನ್ನ 5 ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ ಜಿ ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಭಾರತಿನಗರ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಕುರಿತು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.