ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ‘ಡಿಜಿಟಲ್ ಅರೆಸ್ಟ್’ಗೊಳಪಡಿಸಿ ದೈಹಿಕ ತಪಾಸಣೆ ನೆಪದಲ್ಲಿ ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ ಸೈಬರ್ ದುರುಳರು ಕಿರುಕುಳ ನೀಡಿರುವ ಘಟನೆ ನಗರದಲ್ಲಿ ನಡೆದಿದೆ.
2020ರ ಆ.11ರಂದು ದೇಶಾದ್ಯಂತ ಸದ್ದು ಮಾಡಿದ್ದ ಬೆಂಗಳೂರಿನ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಸಂಬಂಧ ತಪ್ಪೊಪ್ಪಿಗೆ ಹೇಳಿಕೆ ನೀಡಿದ ಮೂವರು ಆರೋಪಿಗಳಿಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ತಲಾ 36 ಸಾವಿರ ರು. ದಂಡ ವಿಧಿಸಿ ನಗರದ ಎನ್ಐಎ ವಿಶೇಷ ನ್ಯಾಯಾಲಯವು ಮಂಗಳವಾರ ತೀರ್ಪು ಪ್ರಕಟಿಸಿದೆ.
ವರದಕ್ಷಿಣೆ ತಾರದ ಪತ್ನಿ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ ಎರಡನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದೆ
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ ಎರಡನೇ ಅಧಿಕ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ದ್ವೇಷದ ಹಿನ್ನೆಲೆಯಲ್ಲಿ ಗಾಂಜಾ ನಿಶೆಯಲ್ಲಿದ್ದ 7 ಮಂದಿ ಯುವಕರ ಗುಂಪು ವ್ಯಕ್ತಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಚಾಮನಹಳ್ಳಿಯಲ್ಲಿ ಜರುಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿ ಮಂಗಳವಾರ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ.
ಭಾರತಿ ನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜು ಶನಿವಾರ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ.