ಷೇರು ಮಾರುಕಟ್ಟೆಯಲ್ಲಿ ನಷ್ಟವಾಯಿತು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕಂಟೇನರ್ ಲಾರಿ ಮಳವಳ್ಳಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಕೆ.ಎಂ.ದೊಡ್ಡಿಯಿಂದ ಮಣಿಗೆರೆಗೆ ತೆರಳುತ್ತಿದ್ದ ಬೈಕ್ಗೆ ಡಿಕ್ಕಿಹೊಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಮತ್ತು ರಾಬಿನ್ ಖಂಡೇಲ್ವಾಲಾ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ–2000) ಹೇರಿ ಸಿಐಡಿಯ ಡಿಜಿಪಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪಾವಗಡ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ಹತ್ಯೆಗೈದಿದ್ದ ಮಾಜಿ ನಕ್ಸಲ್ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಎಂಡಿಎ)ದಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ಆರಂಭವಾಗಿದೆ.
ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.