ಅತ್ಯಾಚಾರ ಪ್ರಕರಣದ ಆರೋಪಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನರವರ ಮನೆ ಹಾಗೂ ಕಚೇರಿಗಳು ಸೇರಿದಂತೆ 11 ಕಡೆ ವಿಶೇಷ ತನಿಖಾ ತಂಡ (ಎಸ್ಐಟಿ) ಶನಿವಾರ ದಿಢೀರ್ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದೆ.