ಪಟ್ಟಣಗೆರೆಯ ಶೆಡ್ನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂದರ್ಭದಲ್ಲಿ ನಟ, ಆರೋಪಿ ದರ್ಶನ್ ಧರಿಸಿದ್ದ ಬಟ್ಟೆಗಳು, ಶೂಗಳು ಸೇರಿ ಕೆಲ ವಸ್ತುಗಳನ್ನು ಜಪ್ತಿ ಮಾಡಿರುವ ಪೊಲೀಸರು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ದರ್ಶನ್ ಗ್ಯಾಂಗ್ ನಾಲ್ವರು ಆರೋಪಿಗಳ ಸ್ಥಳ ಮಹಜರು ಭಾನುವಾರ ಚಿತ್ರದುರ್ಗದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ನಡೆಯಿತು.
ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಏ.19 ರಂದು ನಡೆದಿದ್ದ ಅನುಶ್ರೀ ರಾಘವೇಂದ್ರ ಮಡಿವಾಳ (7) ಎಂಬ ಬಾಲಕಿಯ ನಿಗೂಢ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಾನಸಿಕ ಒತ್ತಡ, ಖಿನ್ನತೆ, ಆತಂಕದಿಂದ ನಿಮ್ಹಾನ್ಸ್ನ ಟೆಲಿಮನಸ್ ಸಹಾಯವಾಣಿಗೆ (14416) ಕರೆಮಾಡುವ ಯುವ ಸಮುದಾಯದ ಸಂಖ್ಯೆ ಹೆಚ್ಚಾಗಿದೆ.
ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪುನಃ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.
ರಕ್ತದ ಕಲೆಗಳು ಸೇರಿದಂತೆ ಇತರೆ ಪುರಾವೆಗಳ ಸಂಗ್ರಹಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ತಜ್ಞರ ಸಹಕಾರದಲ್ಲಿ ಪೊಲೀಸರು ಲೂಮಿನಾರ್ ಪರೀಕ್ಷೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪಿಎಸ್ಐ ಮರು ಪರೀಕ್ಷೆಯಲ್ಲಿ ಎರಡು ರೀತಿಯ ಪ್ರಶ್ನೆ ಪತ್ರಿಕೆಗಳಿದ್ದು ಪತ್ರಿಕೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ವೇಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಿಯಮಗಳನ್ನು ವ್ಯಾಪಕವಾಗಿ ಗಾಳಿಗೆ ತೂರಿದೆ ಎಂಬ ಆರೋಪ ಹಲವು ಅಭ್ಯರ್ಥಿಗಳಿಂದ ಕೇಳಿಬಂದಿದೆ.
ಚಿತ್ರ ನಟ ದರ್ಶನ್ ಹಾಗೂ ಆತನ ಸಹಚರರು ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾತ್ರವಲ್ಲದೆ, ಆತನಿಗೆ ವಿದ್ಯುತ್ ಶಾಕ್ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಆರೋಪಿಯಾಗಿರುವ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕನ ಆಪ್ತನ ಬಳಿ 30 ಲಕ್ಷ ರು. ನಗದು ಜಪ್ತಿ ಮಾಡಿದ್ದಾರೆ.