ಅತ್ಯಾಚಾರ ಪ್ರಕರಣದ ಆರೋಪಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನರವರ ಮನೆ ಹಾಗೂ ಕಚೇರಿಗಳು ಸೇರಿದಂತೆ 11 ಕಡೆ ವಿಶೇಷ ತನಿಖಾ ತಂಡ (ಎಸ್ಐಟಿ) ಶನಿವಾರ ದಿಢೀರ್ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜಾಮೀನು ಕೋರಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಬೆಂಗಳೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಸೆ.30ಕ್ಕೆ ಮುಂದೂಡಿದೆ.
‘ನಾನು ಆಕೆಯನ್ನು ಪ್ರೀತಿಸಿದ್ದೆ. ಆದರೆ ಆಕೆ ನನ್ನನ್ನು ಅಪಹರಣ ಪ್ರಕರಣದಲ್ಲಿ ಸಿಕ್ಕಿಹಾಕಿಸುವುದಾಗಿ ಬೆದರಿಕೆ ಹಾಕಿದ್ದಳು’ ಎಂದು ಬೆಂಗಳೂರಿನಲ್ಲಿ ಗೆಳತಿ ಮಹಾಲಕ್ಷ್ಮೀಯನ್ನು ಹತ್ಯೆಗೈದು 59 ತುಂಡು ಮಾಡಿದ ಆರೋಪಿ ಮುಕ್ತಿ ರಂಜನ್ ರಾಯ್ ಹೇಳಿದ್ದಾನೆ.