ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಗೊಳಗಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ವಿಚಾರಣೆ ಶುಕ್ರವಾರ ನಡೆಯಲಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋಗಳಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ಹರಸಾಹಸ ಪಡುತ್ತಿದ್ದು, ಭೇಟಿ ಮಾಡಲು ಯತ್ನಿಸಿದ ವೇಳೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೊಬೈಲ್ ವಿಚಾರಕ್ಕೆ ಫುಡ್ ಡೆಲಿವರಿ ಬಾಯ್ಗೆ ಬಿಯರ್ ಬಾಟಲಿಯಿಂದ ಹಲ್ಲೆಗೈದಿದ್ದ ಪ್ರಕರಣ ಸಂಬಂಧ ಮಂಗಳಮುಖಿ ಸೇರಿ ನಾಲ್ವರನ್ನು ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಡಿಗೇಹಳ್ಳಿಯ ವಿರೂಪಾಕ್ಷಪುರದಲ್ಲಿ ನಾಲ್ವರು ಅಪರಿಚಿತರು ಗಲಾಟೆ ಮಾಡಿ ತನ್ನ ಪತ್ನಿಯನ್ನು ಲೈಂಗಿಕ ಕ್ರಿಯೆಗೆ ಕರೆದರು ಎಂದು ಬಿಹಾರ ಮೂಲದ ವ್ಯಕ್ತಿ ಮಾಡಿದ್ದ ಆರೋಪ ಸುಳ್ಳು ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ.
ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ ನನ್ನ ವಕೀಲರ ಮೂಲಕ ಸಿಐಡಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ.