ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತ ಇಳಿಕೆ : ಜನವರಿಂದ ಆಗಸ್ಟ್ ವರೆಗೆ 50 ಮಂದಿ ಮೃತಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಈ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. 2023 ರ ಜನವರಿಯಿಂದ ಆಗಸ್ಟ್ ವರೆಗೆ 147 ಮಂದಿ ಮೃತಪಟ್ಟಿದ್ದರೆ, ಈ ವರ್ಷದ ಅದೇ ಅವಧಿಯಲ್ಲಿ 50 ಮಂದಿ ಮೃತಪಟ್ಟಿದ್ದಾರೆ.