ಚಿತ್ರ ನಟ ದರ್ಶನ್ ಹಾಗೂ ಆತನ ಸಹಚರರು ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾತ್ರವಲ್ಲದೆ, ಆತನಿಗೆ ವಿದ್ಯುತ್ ಶಾಕ್ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಆರೋಪಿಯಾಗಿರುವ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕನ ಆಪ್ತನ ಬಳಿ 30 ಲಕ್ಷ ರು. ನಗದು ಜಪ್ತಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಅವರಿಗೆ ಧ್ವನಿ ಪರೀಕ್ಷೆ ಬಳಿಕ ಈಗ ಅಂಗಾಂಗ ಪರೀಕ್ಷೆಯ ಮತ್ತೊಂದು ಸಂಕಷ್ಟ ಎದು ರಾಗುವ ಸಾಧ್ಯತೆಗಳಿವೆ.
ಚಿತ್ರ ನಟ ದರ್ಶನ್ ಸೇರಿದಂತೆ ಆರೋಪಿಗಳ ವಿಚಾರಣೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆಯುತ್ತಿದೆ. ಆದರೆ ಠಾಣೆಯ ಸುತ್ತ ಶಾಮಿಯಾನ ಹಾಕಿ ಇಡೀ ಠಾಣೆಯ ಒಳಗೆ ಏನು ನಡೆಯುತ್ತಿದೆ ಎಂದು ಗೊತ್ತಾಗದಂತೆ ಮರೆಮಾಚಲಾಗಿದೆ. ಪೊಲೀಸರ ಈ ನಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ.
2025ರ ವೇಳೆಗೆ ಭಾರತದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50 ಸ್ಲೀಪರ್ಸೆಲ್ ಸ್ಥಾಪನೆ. ಈ ಸೆಲ್ ಸದಸ್ಯರ ಬಳಸಿಕೊಂಡು ದಾಳಿ ನಡೆಸುವಂಥ ಸಂಚನ್ನು ಕಳೆದ ವರ್ಷ ಕರ್ನಾಟಕದ ಬಳ್ಳಾರಿಯಲ್ಲಿ ಬಯಲಿಗೆಳೆಯಲಾದ ಐಸಿಸ್ ಉಗ್ರರ ಗುಂಪು ರೂಪಿಸಿತ್ತು ಎಂಬ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭನ ಬಳಿ 3.62 ಕೋಟಿ ರು. ನಗದು ಹಣ ಜಪ್ತಿ ಮಾಡಿದ್ದಾರೆ.
ನಟ ದರ್ಶನ್ ಗ್ಯಾಂಗ್ನಿಂದ ಹಲ್ಲೆಗೆ ಒಳಗಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ತಲೆಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.