ಬೈಕ್ಗೆ ಕಾರು ಡಿಕ್ಕಿ: ಗಾಯಗೊಂಡಿದ್ದ ವ್ಯಕ್ತಿ ಸಾವು; ಅಂಗಾಂಗ ದಾನತೀವ್ರ ಗಾಯಗೊಂಡಿದ್ದ ಮಂಜು ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಸಿ.ಮಂಜು ಕೊನೆಯುಸಿರೆಳೆದಿದ್ದಾರೆ. ಮೃತ ಸಿ.ಮಂಜು ಅವರ ಅಂಗಾಂಗವನ್ನು ಕುಟುಂಬದವರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಮೃತರಿಗೆ ಓರ್ವ ಪುತ್ರ ಇದ್ದಾರೆ.