ಏಳನೇ ಮಗುವಿಗೆ ಜನ್ಮ ನೀಡಿ ಆಸ್ಪತ್ರೆಯಲ್ಲೇ ಬಿಟ್ಟುಹೋದ ತಾಯಿ..!ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಬನ್ನಮ್ಮ ಮಗುವನ್ನು ಬಿಟ್ಟುಹೋಗಿರುವ ತಾಯಿಯಾಗಿದ್ದಾಳೆ. ಈಕೆ ಹೆರಿಗೆಗಾಗಿ ಆಸ್ಪತ್ರೆಗೆ ಫೆ.೨೩ರಂದು ದಾಖಲಾಗಿದ್ದಳು. ಆಸ್ಪತ್ರೆಗೆ ದಾಖಲಾದ ಸಮಯದಲ್ಲಿ ಈಕೆ ಮಕ್ಕಳನ್ನು ಮಾರಾಟ ಮಾಡುವ ಕುರಿತಂತೆ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ್ದರು.