ನಟಿ ರನ್ಯಾ ರಾವ್ ಭಾಗಿಯಾಗಿರುವ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಜಾಮೀನು ಕೋರಿ ಎರಡನೇ ಆರೋಪಿ ತರುಣ್ ರಾಜು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಬೆಂಗಳೂರು ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ
ತಮ್ಮ ಮಲ ತಂದೆ ಹಾಗೂ ಡಿಜಿಪಿ ರಾಮಚಂದ್ರರಾವ್ ಹೆಸರು ಬಳಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ನಟಿ ರನ್ಯಾರಾವ್ ಶಿಷ್ಟಾಚಾರ ಸೌಲಭ್ಯ ಪಡೆದ ವಿಚಾರ ಪೊಲೀಸರ ಲೆಡ್ಜರ್ನಲ್ಲಿ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್ಐ) ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ಮಹಿಳೆಯೊಬ್ಬಳನ್ನು ಬಂಧಿಸಿ ₹38.8 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದೆ.
ನಟಿ ರನ್ಯಾ ರಾವ್ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುವ ವೇಳೆ ತನ್ನ ಸ್ನೇಹಿತ ಹಾಗೂ ಪಾಲುದಾರ ತರುಣ್ ರಾಜ್ನ ಅಮೆರಿಕ ಪಾಸ್ಪೋರ್ಟ್ ಬಳಸಿಕೊಂಡಿರುವುದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ.