ಮನೆಯಲ್ಲಿ ಎರಡು ದಿನಗಳ ಕಾಲ ಯಾರೂ ಇರಲಿಲ್ಲ. ಇದನ್ನು ಗಮನಿಸಿರುವ ಕಳ್ಳರು, ಮುಖ್ಯ ದ್ವಾರದ ಬಾಗಿಲನ್ನು ಹಾರೆಯಿಂದ ಮೀಟಿ ಬಾಗಿಲು ಒಡೆದು ಮನೆಯೊಳಗೆ ನುಗ್ಗಿ ಬೀರುವಿನಲ್ಲಿದ್ದ ನಗದು, ಬೆಳ್ಳಿ ಮುಖವಾಡ, ಚಿನ್ನದ ತಾಳಿಯನ್ನು ಕಳವು ಮಾಡಿದ್ದಾರೆ.
ಮದ್ದೂರು ಕುದುರಗುಂಡಿ ಪತ್ನಿ ಕೆ.ಜೆ.ಚೇತನ ಅವರ ಹ್ಯಾಂಡ್ ಬ್ಯಾಗ್ ನಲ್ಲಿದ್ದ 30 ಸಾವಿರ ನಗದು ಹಾಗೂ 1.50 ಲಕ್ಷ ರು. ಮೌಲ್ಯದ 25 ಗ್ರಾಂ ಚಿನ್ನದ ನಕ್ಲೇಸ್ 12 ಗ್ರಾಂ ತೂಕದ ಕಿವಿಯೋಲೆ ಬ್ಯಾಗ್ ನಲ್ಲಿದ್ದ ಆಧಾರ್ ಕಾರ್ಡ್, ಪಾಸ್ ಪುಸ್ತಕ ವನ್ನು ದುಷ್ಕರ್ಮಿಗಳು ಅಪಹರಿಸಿ ಪರಾರಿಯಾಗಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳುಳ್ಳ ಪೆನ್ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ಗೌಡಗೆ ಜಿಲ್ಲೆಯ ಮೂರನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿದೆ.
ನಗರದ ವಿವಿಧೆಡೆ ದಾಳಿ ಮಾಡಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಅಕ್ರಮವಾಗಿ ನೆಲೆಸಿದ್ದ 25 ಮಂದಿ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ವಸತಿ ನಿಲಯದಲ್ಲಿ ವಾಸವಿದ್ದ ವಿದ್ಯಾರ್ಥಿನಿಗೆ ಸ್ನೇಹಿತನನ್ನು ವಿಚಾರಿಸುವ ನೆಪದಲ್ಲಿ ಕರೆ ಮಾಡಿ ಈಚೆಗೆ ಬರುವಂತೆ ತಿಳಿಸಿದ ಯುವಕರಿಬ್ಬರು ನಂತರ ವಿದ್ಯಾರ್ಥಿನಿಯನ್ನು ಬಲವಂತವಾಗಿ ಅತ್ಯಾಚಾರ ಮಾಡಿ ಮತ್ತೆ ವಾಪಸ್ ಪಟ್ಟಣಕ್ಕೆ ತಂದು ಬಿಟ್ಟಿದ್ದಾರೆ.
ಕಾರಿನಲ್ಲಿದ್ದ7 ಲಕ್ಷ ರು. ನಗದು ಎಗರಿಸಲು ಹೋದ ಕಳ್ಳನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ನಗರದ ಹೊರ ವಲಯದ ಅಮರಾವತಿ ಹೊಟೇಲ್ ಬಳಿ ನಡೆದಿದೆ.