ಕೆಲಸದಿಂದ ವಜಾ: ಮುಖ್ಯಮಂತ್ರಿಗಳ ಗಮನ ಸೆಳೆಯಲು ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನ..!ಹಾಸನದಲ್ಲಿರುವ ಚಾಮುಂಡೇಶ್ವರಿ ಶುಗರ್ ಫ್ಯಾಕ್ಟರಿಯಲ್ಲಿ ನೌಕರನಾಗಿದ್ದ ಬೋರೇಗೌಡ ಅವರನ್ನು ಕಾರಣಾಂತರದಿಂದ ಉದ್ಯೋಗದಿಂದ ವಜಾಗೊಳಿಸಲಾಗಿತ್ತು. ಇದರಿಂದ ತನಗೆ ಅನ್ಯಾಯವಾಗಿದ್ದು, ನ್ಯಾಯ ಸಿಗಬೇಕಾದರೆ ಮುಖ್ಯಮಂತ್ರಿಗಳ ಗಮನ ಸೆಳೆಯಬೇಕು ಎಂದು ನಿರ್ಧರಿಸಿ, ಸಿಎಂ ಕ್ಷೇತ್ರದಲ್ಲಿರವ ವರುಣ ಗ್ರಾಮದಲ್ಲಿ ಮೊಬೈಲ್ ಟವರ್ ಅನ್ನು ಗುರುವಾರ ಬೆಳಗ್ಗೆ 10 ಗಂಟೆಯ ಹೊತ್ತಿಗೆ ಏರಿ ಕುಳಿತಿದ್ದಾರೆ.