ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಗರಾಜನಗರದ ನಿವಾಸಿ ಸುರೇಶ್ (45) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತನ ಸ್ನೇಹಿತರಾದ ವೇಲು, ಸ್ಟೀಫನ್ ಹಾಗೂ ಪ್ರದೀಪ್ ಬಂಧಿತರಾಗಿದ್ದಾರೆ.
ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪ್ರಿಯತಮೆ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದ ಚಾಲಕನನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಂಗಮ್ಮ ಲೇಔಟ್ ನಿವಾಸಿ ರವಿಚಂದ್ರ ಬಂಧಿತ , ವೈಯಕ್ತಿಕ ಕಾರಣ ಹಿನ್ನೆಲೆ ತನ್ನ ಪ್ರಿಯತಮೆ ಅಂಜಲಿ ಎಂಬುವರನ್ನು ಚಾಕುವಿನಿಂದ ಹಲ್ಲೆ ನಡೆಸಿ ಆತ ಕೊಂದಿದ್ದ
ಪಂಚರ್ ಆಗಿ ನಿಂತಿದ್ದ ಕಾರಿಗೆ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಮಾಡಿದ ಪರಿಣಾಮ ಕೇರಳ ಮೂಲದ ಓರ್ವ ಬಾಲಕ, ಮಹಿಳೆ ಗಾಯಗೊಂಡು ಚಾಲಕ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮದ್ದೂರು ತಾಲೂಕಿನ ಅಗರಲಿಂಗನ ದೊಡ್ಡಿ ಗ್ರಾಮದ ಬೆಂಗಳೂರು, ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಅಪರಾಧ ಪ್ರಕರಣದಲ್ಲಿ ತಮ್ಮ ಬಂಧಿಸಲು ಬಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಹಾಗೂ ಆತನ ಇಬ್ಬರು ಸಹಚರರು ಈಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ. ಕಲಾಸಿಪಾಳ್ಯದ ರೌಡಿ ಶಹಜಾದ್, ಆತನ ಸಹಚರರಾದ ಅನಿಷ್ ಹಾಗೂ ಯಾಸಿನ್ ಬಂಧಿತರು