ಹೊಸಕೋಟೆಯ ವೈದ್ಯನಿಂದ4 ವರ್ಷದಲ್ಲಿ 100 ಭ್ರೂಣ ಹತ್ಯೆ!ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೊಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯ ವೈದ್ಯ ಡಾ.ಶ್ರೀನಿವಾಸ್, ತಿಂಗಳಿಗೆ ಸರಾಸರಿ 2ರಂತೆ ಕಳೆದ 4 ವರ್ಷಗಳ ಅವಧಿಯಲ್ಲಿ ಸುಮಾರು 100ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ನಡೆಸಿರುವುದು ಪತ್ತೆಯಾಗಿದೆ. ಡಿ.13ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು.