ಮುರುಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಬಂದಿದ್ದ ಟ್ರೆಸಿಯಾ ಲವಿಟ ಅವರ ಲ್ಯಾಪ್ಟಾಪ್, ಮೊಬೈಲ್ ಇದ್ದ ಬ್ಯಾಗ್ ಕಳವಾಗಿತ್ತು. ತನಿಖೆ ಆರಂಭಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ, ಕಳ್ಳತನ ಪ್ರಕರಣಗಳಲ್ಲಿ ಮೊಬೈಲ್ ಮತ್ತು ಲ್ಯಾಪ್ ಟಾಪ್ ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುತ್ತಿದ್ದ ಆರೋಪದ ಮೇರೆಗೆ ಖಾಸಗಿ ಬ್ಯಾಂಕ್ವೊಂದರ ಕಾವಲುಗಾರನನ್ನು ಪೂರ್ವ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.