ಕೇರಳ ಲಾಟರಿ ಟಿಕೆಟ್ ಪಡೆದ ಕರ್ನಾಟಕ ರಾಜ್ಯದ ಮೂಲದವರಿಗೆ ಕೋಟ್ಯಂತರ ರು. ಬಹುಮಾನ ರೂಪದಲ್ಲಿ ಹರಿದುಬರುತ್ತಿರುವುದರಿಂದ ಕೇರಳ ಲಾಟರಿಗೆ ಬೇಡಿಕೆ ಸೃಷ್ಟಿಯಾಗಿದೆ.
ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನಗರ ಆರ್ಥಿಕ ಅಪಾರಾಧಗಳ ತಡೆ ವಿಶೇಷ ನ್ಯಾಯಾಲಯ, ಮಾ.14ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್ಗೆ ಸಂಬಂಧಿಸಿದ ಸಂಸ್ಥೆಗೆ ಕೆಐಎಡಿಬಿಯಿಂದ ಯಾವುದೇ ಭೂಮಿ ಹಂಚಿಕೆ ಮಾಡಿಲ್ಲ ಎಂದು ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ. ಮಹೇಶ್ ಸ್ಪಷ್ಟಪಡಿಸಿದ್ದಾರೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ 2023ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯಿಂದ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಸರ್ಕಾರ ಜಮೀನು ಮಂಜೂರು ಮಾಡಿದ್ದ ವಿಚಾರ ಚರ್ಚೆಗೆ ಗ್ರಾಸವಾಗಿದೆ.