ನಟಿ ರನ್ಯಾ ರಾವ್ ಪ್ರಕರಣ ಇದೀಗ ಮಹತ್ವದ ತಿರುವು ನೀಡಿದೆ. ‘ನಾನು ಟ್ರ್ಯಾಪ್ಗೊಳಗಾಗಿದ್ದೆ’ ಎಂದು ನಟಿ ರನ್ಯಾ ಹೇಳಿಕೆ ನೀಡಿದ್ದು, ಹೀಗಾಗಿ ‘ಟ್ರ್ಯಾಪ್’ನ ಹಿಂದಿರುವ ಹ್ಯಾಂಡ್ಲರ್ಗಳಿಗಾಗಿ ಇದೀಗ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯದ (ಡಿಆರ್ಇ) ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.
ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ, ನ್ಯಾ.ಬಿ.ವೀರಪ್ಪ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದರು.
ತಾಲೂಕಿನ ಬುಳ್ಳಿಕೆಂಪನದೊಡ್ಡಿ ಬಳಿಯ ಜಮೀನಿನಲ್ಲಿ ಉಳುವೆ ಮಾಡುತ್ತಿದ್ದ ವೇಳೆ ವಿದ್ಯುತ್ ಕಂಬದಿಂದ ವಿದ್ಯುತ್ ಸ್ಪರ್ಶಿಸಿ ಹಸುವೊಂದು ಸಾವನ್ನಪ್ಪಿದೆ.
ಅಕ್ರಮವಾಗಿ ಪೋಡಿ ಮಾಡಿಕೊಟ್ಟ ಪ್ರಕರಣದಲ್ಲಿ ನಿವೃತ್ತ ಜಿಲ್ಲಾಧಿಕಾರಿ ವಿ.ಶಂಕರ್ ಸೇರಿದಂತೆ ಮತ್ತಿತರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಪ್ರಾಸಿಕ್ಯೂಷನ್ಗೆ ಸರ್ಕಾರ ನೀಡಿದ್ದ ಪೂರ್ವಾನುಮತಿ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.